Wednesday, November 27, 2024
Wednesday, November 27, 2024

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲ‌ಸ ಮಾಡುತ್ತಿದೆ: ಸಿಎಂ ಬೊಮ್ಮಾಯಿ

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲ‌ಸ ಮಾಡುತ್ತಿದೆ: ಸಿಎಂ ಬೊಮ್ಮಾಯಿ

Date:

ಕಾಪು: ರಾಜ್ಯದ ಜನತೆಯ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲ‌ಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಪುವಿನಲ್ಲಿ ನಡೆದ ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೀನುಗಾರರಿಗೆ ಅಗತ್ಯವಿರುವ ಹೆಚ್ಚುವರಿ ಸೀಮೆಎಣ್ಣೆ ಒದಗಿಸಲು ನಮ್ಮ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಮೀನುಗಾರರಿಗೆ ಸುಸಜ್ಜಿತ ಮನೆ ನಿರ್ಮಿಸಿಕೊಡುವ ಕಾರ್ಯ ಈಗಾಗಲೇ ಪ್ರಗತಿಯಲ್ಲಿದೆ. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ಬಹಳಷ್ಟು ಕೊಡುಗೆ ನೀಡಿದೆ.

ಕರಾವಳಿಗರ ಬಹುದಿನಗಳ ಬೇಡಿಕೆಯಾಗಿದ್ದ ಸಿ.ಆರ್.ಝೆಡ್ ನಿಯಮಗಳಿಗೆ ತಿದ್ದುಪಡಿ ತಂದಿದೆ. ಸಾಗರ್ ಮಾಲಾ ಯೋಜನೆಗೆ ರೂ.1774 ಕೋಟಿ ಅನುದಾನ ನೀಡುವ ಮೂಲಕ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದೆ‌.

ಇಂದು ಸಾಮಾಜಿಕ ನ್ಯಾಯ ಭಾಷಣದ ಸರಕಾಗಿದೆ. ಕಾಂಗ್ರೆಸ್ ಪಕ್ಷ ಕೆಲವು ಸಮುದಾಯಗಳನ್ನು ಕೇವಲ ಭಾಷಣದಿಂದಲೇ ಹೊಟ್ಟೆ ತುಂಬಿಸುತ್ತಾ ಬಂದಿದೆ. ಸಿದ್ದರಾಮಯ್ಯ ಅವರಂತಹ ನಾಯಕರು ಸಾಮಾಜಿಕ ನ್ಯಾಯದ ಹೆಸರಿನಲ್ಲಿ ತಾವೇ ಮುಂದುವರಿದಿದ್ದಾರೆಯೇ ಹೊರತು ಯಾರನ್ನೂ ಬೆಳೆಯಲು ಬಿಟ್ಟಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!