Sunday, November 8, 2026
Sunday, November 8, 2026

ಮುಕ್ತ, ಪಾರದರ್ಶಕ ಚುನಾವಣೆಗೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ

ಮುಕ್ತ, ಪಾರದರ್ಶಕ ಚುನಾವಣೆಗೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ

Date:

ಉಡುಪಿ: ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ನಡೆಯುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್‌ನ ದ್ವೈವಾರ್ಷಿಕ ಚುನಾವಣೆಯಲ್ಲಿ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವ ರೀತಿಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.

ಅವರು ಇಂದು ಉಡುಪಿ ತಾಲೂಕು ಕಚೇರಿಯಲ್ಲಿ ವಿಧಾನಪರಿಷತ್ ಚುನಾವಣೆಯ ಮಸ್ಟರಿಂಗ್ ಕಾರ್ಯಗಳನ್ನು ವೀಕ್ಷಿಸಿ ಮಾತನಾಡಿದರು.

ಚುನಾವಣಾ ಆಯೋಗ ಸೂಚಿಸಿರುವ ಎಲ್ಲಾ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಿ, ಮತದಾನ ಪ್ರಕ್ರಿಯೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಚುನಾವಣಾ ಕರ್ತವ್ಯದಲ್ಲಿ ಭಾಗವಹಿಸುವ ಎಲ್ಲಾ ಸಿಬ್ಬಂದಿಗಳು ಮತ್ತು ಮೈಕ್ರೋ ಅಬ್ಸರ್‌ವರ್‌ಗಳಿಗೆ ತರಬೇತಿಯನ್ನು ನೀಡಲಾಗಿದೆ ಎಂದರು.

ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಸದಸ್ಯರು ಸೇರಿದಂತೆ ಒಟ್ಟು 2505 ಮಂದಿ ಮತದಾರರು ತಮ್ಮ ಮತ ಚಲಾಯಿಸಲಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 8 ರಿಂದ ಮಧ್ಯಾಹ್ನ 4 ರ ವರೆಗೆ ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಡಾ ಗ್ರಾಮ: ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.8: ಕಾಪು ವಿಧಾನಸಭಾ ಕ್ಷೇತ್ರದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಟೆಕ್ಸಾಸ್‌ನಲ್ಲಿ ಎಸ್‌ಬಿಐ ಹೊಸ ಶಾಖೆ ಆರಂಭ; ಅಮೆರಿಕದಲ್ಲೂ ಬ್ಯಾಂಕಿಂಗ್ ವಿಸ್ತರಿಸಿದ ಸ್ಟೇಟ್ ಬ್ಯಾಂಕ್

ಯು.ಬಿ.ಎನ್.ಡಿ., ನ.8: ಅಮೆರಿಕದಲ್ಲಿ ಭಾರತದ ಬ್ಯಾಂಕಿಂಗ್ ಉಪಸ್ಥಿತಿಯನ್ನು ಬಲಪಡಿಸುವ ಮತ್ತು ಗ್ರಾಹಕರಿಗೆ...

ಭಾರತದಾದ್ಯಂತ ಇ20 ಪೆಟ್ರೋಲ್ ನಿಗದಿತ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತದೆ: ಪೆಟ್ರೋಲಿಯಂ ಸಚಿವಾಲಯ

ನವದೆಹಲಿ, ನ.8: ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ...

ಯಕ್ಷಗಾನ ಕಲಾರಂಗದ 108ನೇ ಮನೆ ಹಸ್ತಾಂತರ

ಉಡುಪಿ, ನ.8: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್...
error: Content is protected !!