Monday, January 20, 2025
Monday, January 20, 2025

ಮತ್ಸ್ಯ ಸಂಪದ ಯೋಜನೆ- ಅರ್ಜಿ ಆಹ್ವಾನ

ಮತ್ಸ್ಯ ಸಂಪದ ಯೋಜನೆ- ಅರ್ಜಿ ಆಹ್ವಾನ

Date:

ಉಡುಪಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ 2022-23 ನೇ ಸಾಲಿಗೆ ನೀಡಲಾದ ಗುರಿಗಳಿಗೆ ತಕ್ಕಂತೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅರ್ಹ ಆಸಕ್ತ ಫಲಾನುಭವಿಗಳಿಂದ ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ಧಿ, ಕಡಲ ಕೃಷಿ ಮತ್ತು ಕಡಲ ಕಳೆ ಕೃಷಿಗೆ ಸೇರಿದಂತೆ ಸಮುದ್ರ ಮೀನುಗಾರಿಕೆ ಅಭಿವೃದ್ಧಿ, ಅಲಂಕಾರಿಕ ಮತ್ತು ಮನೋರಂಜನೆ ಮೀನುಗಾರಿಕಾ ಅಭಿವೃದ್ಧಿ, ಅಲಂಕಾರಿಕ ಮೀನು/ಅಕ್ವೇರಿಯಂ ಮಾರಾಟ ಮಳಿಗೆ ಸೇರಿದಂತೆ ಚಿಲ್ಲರೆ ಮೀನು ಮಾರಾಟ ಮಳಿಗೆಗಳ ನಿರ್ಮಾಣ, ಆಳಸಮುದ್ರದ ಮೀನುಗಾರಿಕೆಗೆ ಅಭಿವೃದ್ದಿ ಮತ್ತಿತರ ಯೋಜನೆಗಳಿಗೆ ಹಾಗೂ ನೀಲಿಕ್ರಾಂತಿ ಯೋಜನೆಯಡಿ 2018-19 ಮತ್ಯು 2019-20 ರಲ್ಲಿ ಬಾಕಿ ಉಳಿದಿರುವ 10 ಮೀ ಉದ್ದದ ಎಫ್.ಆರ್.ಪಿ ದೋಣಿ ಶಾಖ ನಿರೋಧಕ ಐಸ್ ಮತ್ತು ಮೀನು ಪೆಟ್ಟಿಗೆಗಳು, ಕಡಲಕಳೆ ಕೃಷಿ – ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮಹಿಳೆಯರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಪೂರ್ಣ ಅರ್ಜಿಗಳನ್ನು ನವೆಂಬರ್ 11 ರ ಒಳಗೆ ಸಂಬಂಧಿಸಿದ ತಾಲೂಕು ಮಟ್ಟದ ಇಲಾಖಾ ಕಛೇರಿಗಳಿಗೆ ಸಲ್ಲಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು, ಉಡುಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ಹೆಚ್ಚಿನ ವಿವರಗಳಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ/ಕಾರ್ಕಳ/ಕುಂದಾಪುರ, ಮೀನುಗಾರಿಕೆ ಉಪನಿರ್ದೇಶಕರು ಉಡುಪಿ ಇವರನ್ನು ಸಂಪರ್ಕಿಸಲು ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!