Sunday, September 22, 2024
Sunday, September 22, 2024

ನ್ಯುಮೋನಿಯಾ ಸಾವು ಶೂನ್ಯಕ್ಕೆ ತನ್ನಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ನ್ಯುಮೋನಿಯಾ ಸಾವು ಶೂನ್ಯಕ್ಕೆ ತನ್ನಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ: ಜಿಲ್ಲೆಯಲ್ಲಿ 0-5 ವರ್ಷದ ಮಕ್ಕಳು ನ್ಯುಮೋನಿಯಾದಿಂದ ಮರಣ ಹೊಂದದಂತೆ ವೈದ್ಯರು , ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಶೀಘ್ರದಲ್ಲಿ ಮಕ್ಕಳಲ್ಲಿನ ಈ ಸಮಸ್ಯೆಯನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಪೋಷಕರಿಗೆ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ನ್ಯುಮೋನಿಯಾ ಸಾವು ಪ್ರಕರಣಗಳನ್ನು ಶೂನ್ಯಕ್ಕೆ ತರಲು ಕಾರ್ಯ ಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ, ನ್ಯುಮೋನಿಯಾವನ್ನು ಯಶಸ್ವಿಯಾಗಿ ಕೊನೆಗಾಳಿಸಲು ಸಾಮಾಜಿಕ ಜಾಗೃತಿ ಮತ್ತು ಕ್ರಿಯಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಶ್ವಾಸಕೋಶದಲ್ಲಿ ರೋಗಾಣುಗಳು ಉಲ್ಬಣವಾಗುವುದರಿಂದ ನ್ಯುಮೋನಿಯಾ ಉಂಟಾಗಲಿದ್ದು, ಇದರಿಂದ ದೇಶದಲ್ಲಿ 5 ವರ್ಷದೊಳಗಿನ ಮಕ್ಕಳು ಮರಣ ಹೊಂದುವ ಪ್ರಮಾಣ ಅಧಿಕವಾಗಿದೆ. ಈ ರೋಗ ಲಕ್ಷಣಗಳ ಬಗ್ಗೆ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಿ ಪ್ರಾರಂಭಿಕ ಹಂತದಲ್ಲಿ ಇದನ್ನು ಗುರುತಿಸಿ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಬಹುದಾಗಿದ್ದು, ಅಂಗನವಾಡಿಗಳಿಗೆ ಬರುವ ಮಕ್ಕಳಲ್ಲಿ ಮತ್ತು ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಕೆಮ್ಮು ಉಸಿರಾಟ ಸಮಸ್ಯೆಯಿರುವ ಮಕ್ಕಳು ಕಂಡುಬಂದಲ್ಲಿ ಕೂಡಲೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ನೀಡುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ನವೆಂಬರ್ 12 ರಿಂದ 2023 ರ ಫೆಬ್ರವರಿ 28 ರ ವರೆಗೆ ನಡೆಯುವ ಈ ಅಭಿಯಾನದಲ್ಲಿ ಹೆಚ್ಚಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು, ಎಲ್ಲಾ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಸ್ವಯಂ ಸೇವಾ ಸಂಘಟನೆಗಳ ಸಹಕಾರ ಪಡೆಯುವುದರ ಜೊತೆಗೆ ಮನೆಗಳಲ್ಲಿ ಹೊಗೆ ರಹಿತ ಅಡುಗೆ ಮಾಡುವ ಬಗ್ಗೆ, ಕೈ ತೊಳೆಯುವ ವಿಧಾನ, ಸ್ವಚ್ಛತೆ ಹಾಗೂ ಶುದ್ದ ಕುಡಿಯುವ ನೀರಿನ ಬಗ್ಗೆ ಕೂಡಾ ಅರಿವು ಮೂಡಿಸಬೇಕು ಎಂದರು.

ನ್ಯುಮೋನಿಯಾ ರೋಗ ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ವೈದ್ಯ ಡಾ. ಮಹದೇವ ಭಟ್, 5 ವರ್ಷದೊಳಗಿನ ಮಕ್ಕಳಲ್ಲಿ ನ್ಯುಮೋನಿಯಾ ರೋಗ ಲಕ್ಷಣಗಳಾದ ಕೆಮ್ಮು, ನೆಗಡಿ, ಉಸಿರಾಟದ ತೊಂದರೆ, ಉಸಿರಾಡುವ ಸಂದರ್ಭದಲ್ಲಿ ಪಕ್ಕೆ ಅಥವಾ ಎದೆಯ ಕೆಳಗೆ ಸೆಳೆತ, ಸಾಮಾನ್ಯಕ್ಕಿಂತ ಹೆಚ್ಚಿನ ವೇಗದ ಉಸಿರಾಟ ಲಕ್ಷಣಗಳು ಇದ್ದಲ್ಲಿ ವೈದ್ಯರನ್ನು ಸಂಪರ್ಕಿಸುವಂತೆ ಮತ್ತು ಮಗುವನ್ನು ಬೆಚ್ಚಗಿಡುವುದುಮ ಮೈ ತುಂಬಾ ಬಟ್ಟೆ ಹಾಕುವುದು ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ನ್ಯುಮೋನಿಯಾ ತಡೆಗಟ್ಟುವ ಲಸಿಕೆಯನ್ನು ಮಕ್ಕಳಿಗೆ ಹಾಕಿಸುವಂತೆ ತಿಳಿಸಿದರು.

ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಜಗೋಪಾಲ ಭಂಡಾರಿ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರಭಾರ) ಡಾ. ರಾಮರಾವ್ ಸ್ವಾಗತಿಸಿ, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ವಂದಿಸಿದರು. ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಎಂ.ಜಿ.ರಾಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!