Sunday, September 22, 2024
Sunday, September 22, 2024

ತೆಂಕನಿಡಿಯೂರು- ಮತದಾರ ಜಾಗೃತಿ ಅಭಿಯಾನ

ತೆಂಕನಿಡಿಯೂರು- ಮತದಾರ ಜಾಗೃತಿ ಅಭಿಯಾನ

Date:

ಉಡುಪಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಮತದಾರರ ಜಾಗೃತಿ ಜಾಥಾ ನಡೆಯಿತು. ಪ್ರಾಂಶುಪಾಲ ಡಾ. ಸುರೇಶ್ ರೈ ಕೆ ಚಾಲನೆಯಿತ್ತು ಶುಭ ಹಾರೈಸಿದರು. ಚುನಾವಣಾ ಸಾಕ್ಷರತಾ ಕ್ಲಬ್ ಸಂಚಾಲಕ ಪ್ರಶಾಂತ ಎನ್. ಕಾರ್ಯಕ್ರಮದ ಔಚಿತ್ಯ ವಿವರಿಸಿದರು.

ತೆಂಕನಿಡಿಯೂರು ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಹಾಗೂ ಕಾರ್ಯದರ್ಶಿ ವಸಂತಿ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಬೈಕ್ ರ‍್ಯಾಲಿಯಲ್ಲಿ ಕಲ್ಯಾಣಪುರದಲ್ಲಿ ಜಾಗೃತಿ ಮೂಡಿಸಿದರು. ಸೈಕಲ್ ಜಾಥಾದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ತೆಂಕನಿಡಿಯೂರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ಕರಬ ಮತ್ತು ಪ್ರೌಢಶಾಲಾ ಹಿರಿಯ ಶಿಕ್ಷಕಿಯಾದ ಪ್ರಕಾಶಿನಿ ಶುಭ ಕೋರಿ ಸೈಕಲ್ ಜಾಥಾಕ್ಕೆ ಚಾಲನೆಯಿತ್ತರು.

ಜಾಥಾ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಧಾಕೃಷ್ಣ, ಕನ್ನಡ ಸಹ ಪ್ರಾಧ್ಯಾಪಕ ಡಾ. ವೆಂಕಟೇಶ ಹೆಚ್.ಕೆ., ಅರ್ಥಶಾಸ್ತ್ರ ಉಪನ್ಯಾಸಕ ಅಶೋಕ್, ರಾಜ್ಯಶಾಸ್ತ್ರ ಉಪನ್ಯಾಸಕ ರವಿ ಚಿತ್ರಾಪುರ, ಕಛೇರಿ ಸಿಬ್ಬಂದಿಯವರು ಉಪಸ್ಥಿತರಿದ್ದು ಸಹಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...
error: Content is protected !!