Sunday, September 22, 2024
Sunday, September 22, 2024

ಬ್ರಹ್ಮಾವರ-ಮಕ್ಕಳ ರಕ್ಷಣೆ ಅರಿವು ಕಾರ್ಯಕ್ರಮ

ಬ್ರಹ್ಮಾವರ-ಮಕ್ಕಳ ರಕ್ಷಣೆ ಅರಿವು ಕಾರ್ಯಕ್ರಮ

Date:

ಬ್ರಹ್ಮಾವರ: ಚೈಲ್ಡ್ ಲೈನ್-1098, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ರೋಟರಿ ಉಡುಪಿ ಇವರ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆ ಮತ್ತು ಚೈಲ್ಡ್ ಲೈನ್ ಸೇ ದೋಸ್ತಿ ಸಪ್ತಾಹದ ಅಂಗವಾಗಿ ಸರ್ಕಾರಿ ಪ್ರಾಥಮಿಕ ಶಾಲೆ ಬ್ರಹ್ಮಾವರ ಇಲ್ಲಿ ಮಕ್ಕಳ ರಕ್ಷಣೆಯ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಧನ್ವಂತರಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹೆಣ್ಣು ಮಕ್ಕಳ ಸಬಲೀಕರಣದ ಕುರಿತು ಕಿರುಪ್ರಹಸನವನ್ನು ಪ್ರಸ್ತುತಪಡಿಸಿದರು. ಸಂಪನ್ಮೂಲ ವ್ಯಕ್ತಿ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮುಕ್ತಾಬಾಯಿ, ಇವರು ಮಕ್ಕಳ ಹಕ್ಕುಗಳ ರಕ್ಷಣೆ ಮಕ್ಕಳ ಮೇಲಾಗುವ ದೈಹಿಕ ಮತ್ತು ಲೈಂಗಿಕ ದೌರ್ಜನ್ಯಗಳ ಮತ್ತು ಫೋಕ್ಸೋ ಕಾಯಿದೆಯ ಕುರಿತು ಮಕ್ಕಳಿಗೆ ಅರಿವನ್ನು ಮೂಡಿಸಿದರು.

ಶಿಕ್ಷಣ ಸಂಯೋಜಕ ಪ್ರಕಾಶ್.ಬಿ.ಬಿ ಶಿಕ್ಷಣದ ಮಹತ್ವದ ಕುರಿತು ಹಾಗೂ ಮಕ್ಕಳ ಹಕ್ಕು ಕರ್ತವ್ಯದ ಕುರಿತು ಮಾಹಿತಿಯನ್ನು ನೀಡಿದರು.

ಚೈಲ್ಡ್ ಲೈನ್-1098 ಉಡುಪಿ ಸಹನಿರ್ದೆಶಕರಾದ ಗುರುರಾಜ್ ಭಟ್, ಬ್ರಹ್ಮಾವರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‍ಸ್ಟೇಬಲ್ ಪ್ರವೀಣ್, ಎಸ್.ಡಿ.ಎಮ್.ಸಿ ಉಪಾದ್ಯಕ್ಷರಾದ ಸರಿತಾ ಮತ್ತು ಚೈಲ್ಡ್ ಲೈನ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಚೈಲ್ಡ್ ಲೈನ್-1098 ಉಡುಪಿಯ ನಿರ್ದೇಶಕರಾದ ರಾಮಚಂದ್ರ ಉಪಾಧ್ಯಾಯ ಸ್ವಾಗತಿಸಿ, ಬ್ರಹ್ಮಾವರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ದೇವಕುಮಾರಿ ವಂದಿಸಿದರು. ಚೈಲ್ಡ್ ಲೈನ್-1098 ಉಡುಪಿ ಕೇಂದ್ರ ಸಂಯೋಜಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!