Saturday, November 7, 2026
Saturday, November 7, 2026

ಸಂಗೀತ ದಿಗ್ಗಜ ರಾಘವೇಂದ್ರ ಭಟ್ ಅವರಿಗೆ ನುಡಿನಮನ; ರಂಗಸಂಗೀತ ಪ್ರಾತ್ಯಕ್ಷಿಕೆ

ಸಂಗೀತ ದಿಗ್ಗಜ ರಾಘವೇಂದ್ರ ಭಟ್ ಅವರಿಗೆ ನುಡಿನಮನ; ರಂಗಸಂಗೀತ ಪ್ರಾತ್ಯಕ್ಷಿಕೆ

Date:

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಭರತಾಂಜಲಿ ಉಡುಪಿ ಆಶ್ರಯದಲ್ಲಿ ಕಡಿಯಾಳಿ ಭರತಾಂಜಲಿ ಸಭಾಂಗಣದಲ್ಲಿ ಉಡುಪಿಯ ಹಿರಿಯ ಸಂಗೀತ ನಿರ್ದೇಶಕ ಕೆ. ರಾಘವೇಂದ್ರ ಭಟ್ ಅವರಿಗೆ ನುಡಿನಮನ ಹಾಗೂ ರಂಗ ಸಂಗೀತ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಎನ್ ಎಸ್ ಭಟ್ ಅವರು ಇತ್ತೀಚೆಗೆ ನಿಧನರಾದ ಕೆ ರಾಘವೇಂದ್ರ ಭಟ್ ಅವರಿಗೆ ನುಡಿನಮನ ಸಲ್ಲಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ವಹಿಸಿದ್ದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರು ಹಾಗೂ ಗೌರವಾಧ್ಯಕ್ಷರಾದ ಯು ವಿಶ್ವನಾಥ್ ಶೆಣೈ ಹಾಗೂ ಭರತಾಂಜಲಿ ಉಡುಪಿಯ ನಿರ್ದೇಶಕಿ ರಶ್ಮಿ ವಿಜಯೇಂದ್ರ ಉಪಸ್ಥಿತರಿದ್ದರು. ರಂಗಾಯಣ ಮೈಸೂರು ಇದರ ಸಂಗೀತ ನಿರ್ದೇಶಕರಾಗಿದ್ದ ಶ್ರೀನಿವಾಸ್ ಭಟ್ (ಚೀನಿ ) ಅವರು ರಂಗಸಂಗೀತದ ಕುರಿತು ಪ್ರಾತ್ಯಕ್ಷಿಕೆ ನೀಡಿದರು.

ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ ಸ್ವಾಗತಿಸಿ, ರಾಜೇಶ್ ಭಟ್ ವಂದಿಸಿದರು. ರವಿರಾಜ್ ಎಚ್.ಪಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಗುಡುಗು ಸಹಿತ ಮಳೆ

ಉಡುಪಿ, ನ.6: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ಗುಡುಗು ಸಹಿತ...

ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು, ನ.6: ಗೃಹಕಚೇರಿ ಕೃಷ್ಣಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ....

ಉಡುಪಿ ಶ್ರೀ ಕೃಷ್ಣ ಮಠ: ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

ಉಡುಪಿ, ನ.6: ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸವನ್ನು...
error: Content is protected !!