Monday, November 25, 2024
Monday, November 25, 2024

ಛಾಯಾ ಧರ್ಮ ಜಾಗೃತಿ ಮೂಲಕ ಸಂಚಲನ ಮೂಡಿಸಿದ ಉಡುಪಿಯ ಛಾಯಾಗ್ರಾಹಕರು: ವಿಜಯ ಕೊಡವೂರು

ಛಾಯಾ ಧರ್ಮ ಜಾಗೃತಿ ಮೂಲಕ ಸಂಚಲನ ಮೂಡಿಸಿದ ಉಡುಪಿಯ ಛಾಯಾಗ್ರಾಹಕರು: ವಿಜಯ ಕೊಡವೂರು

Date:

ಉಡುಪಿ: ಛಾಯಾ ಧರ್ಮ ಜಾಗೃತಿಯ ಮೂಲಕ ಪಾಳು ಬಿದ್ದಿರುವ ದೇವರ ಛಾಯಾಚಿತ್ರಗಳನ್ನು ವ್ಯವಸ್ಥಿತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ನಾಗರಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ಸದಸ್ಯರು ಯಶಸ್ವಿಯಾಗಿದ್ದಾರೆ ಎಂದು ನಗರಸಭಾ ಸದಸ್ಯ ವಿಜಯ ಕೊಡವೂರು ಹೇಳಿದರು.

ಅವರು ಹೋಟೆಲ್ ಕಿದಿಯೂರಿನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆದ ಎಸ್.ಕೆ.ಪಿ.ಎ ಉಡುಪಿ ವಲಯದ 28ನೇ ಸಂವತ್ಸರ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿದರು.

ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಛಾಯಾಗ್ರಾಹಕರ ಬಹುದಿನದ ಬೇಡಿಕೆಯಾದ ಸ್ವಂತ ಕಟ್ಟಡಕ್ಕೆ ನಿವೇಶನ ದೊರಕಿಸಿಕೊಡುವಲ್ಲಿ ಕಾರ್ಯಯೋನ್ಮುಖರಾಗಿದ್ದೇವೆ ಎಂದರು.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಹುಮಾನ ವಿತರಣೆ ನೆರವೇರಿಸಿ, ಇಂದಿನ ದಿನಗಳಲ್ಲಿ ಛಾಯಾಗ್ರಾಹಕರ ಅಗತ್ಯತೆಯ ಬಗ್ಗೆ ವಿವರಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾರವರು, ವಲಯ ನಿರ್ಮಿಸಿದ ಬದುಕು ಬಂಗಾರ ಕಿರು ಚಿತ್ರವನ್ನು ಲೋಕಾರ್ಪಣೆಗೊಳಿಸಿ ಛಾಯಾಗ್ರಹಕರ ಕಾರ್ಯಚಟುವಟಿಕೆಯನ್ನು ಶ್ಲಾಘಿಸಿದರು.

ಕಾಂತಾರದ ಕಮಲಕ್ಕ ಖ್ಯಾತಿಯ ಮಾನಸಿ ಸುಧೀರ್, ಕೆಪಿಎಯಿಂದ ಪುರಸ್ಕೃತರಾದ ಕೆ ನವೀನಚಂದ್ರ ಬಲ್ಲಾಳ್, ಕರಾಟೆಯಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ರಿಯಾ ಗಣೇಶ್ ಇವರುಗಳನ್ನು ಅಭಿನಂದಿಸಲಾಯಿತು.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮತ್ತು ಛಾಯಾಗ್ರಹಣ ಕ್ಷೇತ್ರದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹುಮಾನ ಪಡೆದವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಜಿತೇಶ್ ಕಿದಿಯೂರು, ಯುವರಾಜ್ ದುಬೈ, ಕೆ. ವಾಸುದೇವ ರಾವ್, ಆಸ್ಟ್ರೋ ಮೋಹನ್, ವಾಮನ ಪಡುಕೆರೆ, ಸುಧೀರ್ ಎಂ ಶೆಟ್ಟಿ, ಪ್ರವೀಣ್ ಹೂಡೆ, ಪ್ರವೀಣ್ ಕೊರೆಯ, ಪ್ರಕಾಶ್ ಶೆಟ್ಟಿ, ಅಶೋಕ್ ಪುತ್ರನ್, ಪ್ರವೀಣ್ ಹರಿಖಂಡಿಗೆ, ಮಂಜು ಪರ್ಕಳ, ದಾಮೋದರ ಸುವರ್ಣ, ಸತೀಶ್ ಸೇರಿಗಾರ್, ಹರೀಶ್ ಅಲೆವೂರ್, ಸಂದೀಪ್ ಕಾಮತ್ ಉಪಸ್ಥಿತರಿದ್ದರು.

ವಲಯ ಅಧ್ಯಕ್ಷ ಜನಾರ್ದನ ಕೊಡವೂರು ಸ್ವಾಗತಿಸಿ, ಕೋಶಾಧಿಕಾರಿ ದಿವಾಕರ್ ಹಿರಿಯಡ್ಕ ವಂದಿಸಿದರು. ರಾಘವೇಂದ್ರ ಸೇರಿಗಾರ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!