ಉಡುಪಿ: ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ರವರಿಗೆ ಉಡುಪಿ ಜಿಲ್ಲಾ ಬಿಜೆಪಿ ಮತ್ತು ಉಡುಪಿ ನಗರ ಬಿಜೆಪಿ ವತಿಯಿಂದ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಮರ್ಪಿಸಲಾಯಿತು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆಯವರು ನುಡಿ ನಮನಗಳನ್ನು ಸಲ್ಲಿಸಿ, ಅಪ್ರತಿಮ ಯೋಧ, ದೇಶದ ಎಲ್ಲಾ ಮೂರು ಸೇನಾ ಪಡೆಗಳನ್ನು ಸಮರ್ಥವಾಗಿ ನಿಭಾಯಿಸಿ, ಭಾರತೀಯ ಸೇನೆಗೆ ಸದಾ ಬೆಂಗಾವಲಾಗಿ ನಿಂತು ದೇಶ ಸೇವೆ ಮಾಡುತ್ತಿದ್ದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ರವರ ದಿಟ್ಟ ನಿಲುವು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಭದ್ರತೆಯ ವಿಚಾರದಲ್ಲಿ ಕೈಗೊಂಡಿರುವ ಪರಿಣಾಮಕಾರಿ ಕ್ರಮಗಳು ಎಂದೆಂದಿಗೂ ಸ್ಮರಣೀಯ.
ಮಹಾನ್ ಯೋಧ ಜನರಲ್ ಬಿಪಿನ್ ರಾವತ್ ರವರ ಅಗಲುವಿಕೆ ದೇಶಕ್ಕೆ ತುಂಬಲಾರದ ನಷ್ಟವೆನಿಸಿದೆ. ಅವರ ಸಮರ್ಪಣಾಭಾವದ ದೇಶ ಸೇವೆ ಅಜರಾಮರ ಎಂದರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಎಮ್. ಸುವರ್ಣ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪೆರ್ಣಂಕಿಲ ಶ್ರೀಶ ನಾಯಕ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ನಯನಾ ಗಣೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ರೇಶ್ಮಾ ಉದಯ ಶೆಟ್ಟಿ, ನಳಿನಿ ಪ್ರದೀಪ್ ರಾವ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕುಮಾರ್ ಉದ್ಯಾವರ, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರಾದ ಸುರೇಂದ್ರ ಪಣಿಯೂರು, ವೀಣಾ ಎಸ್. ಶೆಟ್ಟಿ, ಪ್ರವೀಣ್ ಕುಮಾರ್ ಗುರ್ಮೆ, ದಾವೂದ್ ಅಬೂಬಕರ್, ನಿತ್ಯಾನಂದ ನಾಯಕ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ್, ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಮತ್ತು ಬೂತ್ ಸಮಿತಿಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.




By
ForthFocus™