Saturday, September 21, 2024
Saturday, September 21, 2024

ಅಂಬೇಡ್ಕರ್ ಓದು ಕಾರ್ಯಕ್ರಮ

ಅಂಬೇಡ್ಕರ್ ಓದು ಕಾರ್ಯಕ್ರಮ

Date:

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇವರ ಸಹಯೋಗದಲ್ಲಿ ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣ ಗೊಲ್ಲ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವ ಪೀಳಿಗೆ ಉದ್ಯೋಗ ಮತ್ತು ಸಾಮಾಜಿಕ ನ್ಯಾಯ ಪಡೆಯಬೇಕಾದರೆ ಡಾ. ಬಿ. ಆರ್ ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟದ ಬದುಕನ್ನು ಆಳವಾಗಿ ಅಧ್ಯಯನ ಮಾಡಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್ ನಾಯಕ್ ಮಾತನಾಡಿ, ಶಿಕ್ಷಣ ತಜ್ಙ ಹಾಗೂ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ದೇಶ ಕಂಡ ಅಪರೂಪದ ವ್ಯಕ್ತಿ. ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಶಿಸ್ತಿನ ಜೀವನ ರೂಪಿಸಿಕೊಳ್ಳಿ ಎಂದರು. ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ.ಶ್ರೀಕಾಂತ್ ಅಂಬೇಡ್ಕರ್ ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಅಂಬೇಡ್ಕರ್ ಕುರಿತ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಉಷಾದೇವಿ, ಐಕ್ಯೂಎಸಿ ಸಂಚಾಲಕ ನಾಗರಾಜ ಯು, ಬೋದಕ ಬೋದಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಡಾ. ಶ್ರೀಮತಿ ಅಡಿಗ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!