Monday, January 20, 2025
Monday, January 20, 2025

ನ. 22-24 ರವರೆಗೆ ಉಡುಪಿ ಜಿಲ್ಲೆಯ ಹಲವೆಡೆ ವಿದ್ಯುತ್ ವ್ಯತ್ಯಯ

ನ. 22-24 ರವರೆಗೆ ಉಡುಪಿ ಜಿಲ್ಲೆಯ ಹಲವೆಡೆ ವಿದ್ಯುತ್ ವ್ಯತ್ಯಯ

Date:

ಉಡುಪಿ: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ನವೆಂಬರ್ 22 ರಿಂದ 24 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ನವೆಂಬರ್ 22 ರಂದು 220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ ಹಾಗೂ 110/11 ಕೆವಿ ಬೆಳ್ಮಣ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ ಮತ್ತು ಬೆಳ್ಮಣ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ಫೀಡರ್ ಗಳಲ್ಲಿ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೈ, ಬೊರ್ಗಲ್ ಗುಡ್ಡೆ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಕಲ್ಯಾ, ಬೆಳ್ಮಣ್, ನಂದಳಿಕೆ, ಜಂತ್ರ, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವು ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/33/11 ಕೆ.ವಿ ಕುಂದಾಪುರ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಅಂಪಾರು, ಬಳ್ಕೂರು ಮತ್ತು ಜಪ್ತಿ ವಾಟರ್ ಸಪ್ಲೈ ಮಾರ್ಗಗಳಲ್ಲಿ ಟ್ರೀ ಟ್ರಿಮ್ಮಿಂಗ್ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅಂಪಾರು, ಹಳ್ನಾಡು, ಕಾವ್ರಾಡಿ, ಶಂಕರನಾರಾಯಣ, ಕೋಣಿ, ಬಳ್ಕೂರು, ಕಂಡ್ಲೂರು, ಮೂಡ್ಲಕಟ್ಟೆ, ಕುಂದಾಪುರ ಪುರಸಭೆಯ ಕುಡಿಯುವ ನೀರಿನ ಸ್ಥಾವರ, ಬಸ್ರೂರು, ಆನಗಳ್ಳಿ ಮತ್ತು ಕಂದಾವರ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ವರಾಹಿ ವಿದ್ಯುದಾಗಾರದಲ್ಲಿ ಬ್ಲಾಕ್ ಸ್ಟಾರ್ಟ್ ಪೋಸೀಜರ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 110ಕೆವಿ ಮಣಿಪಾಲ, ನಿಟ್ಟೂರು, ಬ್ರಹ್ಮಾವರ, 33ಕೆವಿ ಕುಂಜಿಬೆಟ್ಟು, 33ಕೆವಿ ಮಲ್ಪೆ, 33ಕೆವಿ ಶಿರ್ವ ಫೀಡರಿನಲ್ಲಿ ಉಡುಪಿ ತಾಲೂಕು, ಮಣಿಪಾಲ ಉಪವಿಭಾಗ ಏರಿಯಾ, ಬ್ರಹ್ಮಾವರ ತಾಲೂಕು, ಕಾಪು ತಾಲೂಕು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯವಾಗುತ್ತದೆ.

110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಮೂಡುಬೆಳ್ಳೆ ಮತ್ತು ಉದ್ಯಾವರ-2 ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು, ಕೊರಂಗ್ರಪಾಡಿ, ಮಾರ್ಪಳ್ಳಿ, ಕುಕ್ಕಿಕಟ್ಟೆ, ಉದ್ಯಾವರ-2, ಕಟಪಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಮಟಪಾಡಿ, ಹೇರೂರು, ಕೊಳಲಗಿರಿ, ಚೇರ್ಕಾಡಿ ಹಾಗೂ 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಲ್ಯಾಣಪುರ ಫೀಡರಿನಲ್ಲಿ ಹಾಗೂ 220/110/11ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಹೆಗ್ಗುಂಜೆ ಉಪಕೇಂದ್ರದಿಂದ ಹೊರಡುವ 11ಕೆವಿ ಹೆಗ್ಗುಂಜೆ ಮತ್ತು ನಂಚಾರು ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಟಪಾಡಿ, ಉಪ್ಪೂರು, ಮಾಯಾಡಿ, ಸಾಲ್ಮರ, ಕುದ್ರುಬೆಟ್ಟು, ಕೆ.ಜಿ ರೋಡ್, ಕೋಟೆ ರೋಡ್, ನಿಡಂಬಳ್ಳಿ, ಕಲ್ಯಾಣಪುರ, ಉಗ್ಗೇಲ್ ಬೆಟ್ಟು, ಜಾತಬೆಟ್ಟು, ಹಾವಂಜೆ, ಆದಶ್ನಗರ, ಕೀರ್ತಿನಗರ, ಸಾಲಿಕೇರಿ, ಬಿರ್ತಿ, ಹೊನ್ನಾಳ, ಕುಕ್ಕುಡೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್ ಕಲಾಮಂದಿರ, ಕೆ.ಕೆ. ಫಾರ್ಮ್ಸ್, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಬಡಾನಿಡಿಯೂರು, ಹೆಗ್ಗುಂಜೆ, ಕಾಡೂರು, ಪೆಜಮಂಗೂರು, ಕೊಕ್ಕರ್ಣೆ, ಕೆಂಜೂರು, ಶಿರೂರು, ಹಿಲಿಯಾಣ, ನಂಚಾರು, ಮುದ್ದೂರು, ಕಜ್ಕೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

33/11 ಮಣಿಪಾಲ-ಶಿರ್ವ ಲೈನ್‌ನಲ್ಲಿ ಮತ್ತು 33/11ಕೆವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ ವಾಹಕ ಬದಲಾವಣೆ ಕಾಮಗಾರಿ ಮತ್ತು ಬ್ಯಾಂಕ್-1 ಗೆ ಸಂಬಂಧಿಸಿದ ಕಂಟ್ರೋಲ್ ಕೇಬಲ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್ ಮಾರ್ಗದಲ್ಲಿ ಉಳಿಯಾರಗೋಳಿ ಬಂಟಕಲ್ಲು ಗ್ರಾಮ, ಪೊಲಿಪು ಗ್ರಾಮ, ಮೂಡಬೆಟ್ಟು ಗ್ರಾಮ, ಪಾಂಗಳ ಗ್ರಾಮ, ಶಿರ್ವ ಹಾಗೂ ಶಂಕರಪುರ ಗ್ರಾಮ, ಕುರ್ಕಾಲು ಗ್ರಾಮ, ಇನ್ನಂಜೆ ಗ್ರಾಮ, ಕಳತ್ತೂರು ಗ್ರಾಮ (ಪುಂಚಲಕಾಡು), ಪಣಿಯೂರು ಗ್ರಾಮ, ಬಡಾ ಗ್ರಾಮ(ಉಚ್ಚಿಲ), ಮೂಳೂರು ಗ್ರಾಮ, ಬೆಳಪು ಗ್ರಾಮ, ಮಲ್ಲಾರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

ನವೆಂಬರ್ 23 ರಂದು 110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕೆ.ಎಂ.ಎಫ್ ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈಶ್ವರನಗರ, ಸರಳೇಬೆಟ್ಟು, ಅರ್ಬಿ, ಪ್ರಗತಿನಗರ, 80 ಬಡಗುಬೆಟ್ಟು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

ನವೆಂಬರ್ 24 ರಂದು 110/11ಕೆವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬಾರ್ಕೂರು ಎಕ್ಸ್ ಪ್ರೆಸ್ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ಹಾಗೂ 110/11ಕೆವಿ ನಂದಿಕೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಎರ್ಮಾಳು, ನಂದಿಕೂರು ಮತ್ತು ಸಾಂತೂರು ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎರ್ಮಾಳು, ತೆಂಕ, ಬಡಾ, ಪೂಂದಾಡು, ಅದಮಾರು, ಹೆಜಮಾಡಿ, ಅವರಾಲು, ನಡ್ಸಾಲು, ನಂದಿಕೂರು, ಎನ್.ಎಸ್ ರೋಡ್, ಪಡುಬಿದ್ರೆ, ಎಸ್.ಎಸ್ ರೋಡ್, ಡೌನ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!