ಕುಂದಾಪುರ: ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವ ಮೊದಲು ಆ ಬಗೆಗೆ ನಿರ್ದಿಷ್ಟವಾದ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಬೇಕು. ಗುರಿಯ ದಿಕ್ಕಿನಲ್ಲಿ ಪರಿಶ್ರಮವನ್ನು ದಾರಿಯೆದಾಗ ಮಾತ್ರ ಯಶಸ್ಸು ನಮ್ಮದಾಗುತ್ತದೆ ಎಂದು ಯುವ ಉದ್ಯಮಿ ಶಾರ್ಲೆಟ್ ಲೋಬೊ ಹೇಳಿದರು.
ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಇಂಟರಾಕ್ಟ್ ಕ್ಲಬ್ ಇವರ ಸಹಯೋಗದಲ್ಲಿ ಇಲ್ಲಿನ ಪ್ರೌಢಶಾಲಾ ವಿಭಾಗದ ಮಕ್ಕಳಿಗಾಗಿ ನಡೆದ ಸ್ವಯಂ ಅರಿವಿನ ವ್ಯಕ್ತಿತ್ವ ವಿಕಸನ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಗೆಲುವಿನ ಹಾದಿಯಲ್ಲಿ ತಪ್ಪುಗಳನ್ನು ಒಪ್ಪಿಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ತಪ್ಪುಗಳನ್ನು ಪುನರಾವರ್ತಿಸದೆ ಛಲದಿಂದ ಮುನ್ನುಗ್ಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ಬಿನ ಅಧ್ಯಕ್ಷೆ ಸುಗುಣ ಆರ್ ಕೆ ವಹಿಸಿಕೊಂಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ಶಿಕ್ಷಕಿಯಾದ ಸುಜಾತ ದೇವಾಡಿಗ ನೆರವೇರಿಸಿದರು.
ಗಣೇಶ ಚತುರ್ಥಿಯ ಪ್ರಯುಕ್ತ ಇಂಟ್ರಾಕ್ಟ್ ಕ್ಲಬ್ಬಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ನಮಿತಾ ಶೆಣೈ ವಿತರಿಸಿದರು. ಇಂಟ್ರಾಕ್ಟಿನ ಟೀಚರ್ಸ್ ಕೋಆರ್ಡಿನೇಟರಾದ ಲವೀನಾ ಸ್ವಾಗತಿಸಿ ದಿವ್ಯಶ್ರೀ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.