Monday, January 20, 2025
Monday, January 20, 2025

ಉಡುಪಿ- ಧಾರ್ಮಿಕ ಇಲಾಖೆ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

ಉಡುಪಿ- ಧಾರ್ಮಿಕ ಇಲಾಖೆ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

Date:

ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ಪ್ರವರ್ಗ-ಬಿ(1) ಮತ್ತು ಸಿ(1) ಅಧಿಸೂಚಿತ ಸಂಸ್ಥೆಗಳಾದ ಉಡುಪಿ ತಾಲೂಕು ಕೊಡವೂರು ಶ್ರೀಶಂಕರನಾರಾಯಣ ದೇವಸ್ಥಾನದ ಸಾಮಾನ್ಯ ಒಂದು ಸ್ಥಾನಕ್ಕೆ ಮತ್ತು ಬೈಂದೂರು ತಾಲೂಕು ಹೇರೂರು ಚಿಕ್ತಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪರಿಶಿಷ್ಟ ಜಾತಿಯ ಒಂದು ಸ್ಥಾನಕ್ಕೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಆಸಕ್ತ ಭಕ್ತಾಧಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಠ 25 ವರ್ಷ ಮೇಲ್ಪಟ್ಟ ಆಸಕ್ತರು ಅರ್ಜಿ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರ ಕಚೇರಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!