ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಗಣಕ ವಿಜ್ಞಾನ ವಿಭಾಗದಿಂದ ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ರುಕ್ಮಿಣಿ ಶೆಡ್ತಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ಉಪನ್ಯಾಸಕ ಹರೀಶ್ ಕಾಂಚನ್ ಇವರು ತೃತೀಯ ಬಿ.ಸಿ.ಎ. ವಿದ್ಯಾರ್ಥಿಗಳಿಗೆ ವೆಬ್ ಟೆಕ್ನಾಲಜಿ ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ನೀಡಿದರು. ಇಂದಿನ ದಿನಗಳಲ್ಲಿ ಕಂಪ್ಯೂಟರ್ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಿಭಿನ್ನ ಮತ್ತು ವಿಶೇಷವಾದ ಅವಕಾಶಗಳು ವಿಫುಲವಾಗಿ ಲಭಿಸುತ್ತವೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ರೈ ಕೆ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕಿ ಡಾ. ಮೇವಿ ಮಿರಾಂದ ಹಾಗೂ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ವಿಭಾಗ ಮುಖ್ಯಸ್ಥರಾದ ಬಸವರಾಜ್ ಯು. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.