Monday, January 20, 2025
Monday, January 20, 2025

ಅಂಬಾಗಿಲು-ಕಲ್ಸಂಕ ಮಾರ್ಗವಾಗಿ ಬಸ್‌ಗಳು ಸಂಚರಿಸಲು ಸೂಚನೆ

ಅಂಬಾಗಿಲು-ಕಲ್ಸಂಕ ಮಾರ್ಗವಾಗಿ ಬಸ್‌ಗಳು ಸಂಚರಿಸಲು ಸೂಚನೆ

Date:

ಉಡುಪಿ: ಜಿಲ್ಲಾಧಿಕಾರಿಗಳ ಅಧಿಸೂಚನೆಯಂತೆ ಸಂತೆಕಟ್ಟೆಯಿಂದ ಉಡುಪಿ ಕಡೆಗೆ ತೆರಳುವ ಕೆಲವೊಂದು ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರು-ರಾ.ಹೆ. 17 ಎಂದು ನಮೂದಿಸಿರುವ ಬಸ್ಸುಗಳು ಅಂಬಾಗಿಲು ರಾ.ಹೆ. 66 ಕರಾವಳಿ ಬೈಪಾಸಿನಿಂದ ಅಂಬಲಪಾಡಿ ಬೈಪಾಸ್-ಬ್ರಹ್ಮಗಿರಿ-ಅಜ್ಜರಕಾಡು-ತಾಲೂಕು ಕಚೇರಿ ಮೂಲಕ ಹಾಗೂ ಉಳಿದ ಸಿಟಿ ಬಸ್ಸುಗಳು ಅಂಬಾಗಿಲು ತಾಂಗದಗಡಿ-ಗುಂಡಿಬೈಲು ಮೂಲಕ ಕಲ್ಸಂಕ ಬಂದು ಬೃಂದಾವನ ಹೋಟೆಲ್ ಬಳಿ ಎಡಕ್ಕೆ ತಿರುಗಿ ಖಾಫಿಯ ಹೋಟೆಲ್ ಬಳಿ ಬಲಕ್ಕೆ ತಿರುಗಿ ಸಿಟಿ ಬಸ್ಸು ನಿಲ್ದಾಣಕ್ಕೆ ಹಾಗೂ ಬಾರ್ಕೂರು-ಬ್ರಹ್ಮಾವರ-ಹೊನ್ನಾಳ-ಹೆಬ್ರಿ-ಪೆರ್ಡೂರು-ಕುಕ್ಕೆಹಳ್ಳಿ ಹಾಗೂ ಇತರೆ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲು ಗುಂಡಿಬೈಲು ಮೂಲಕ ಕಲ್ಸಂಕ ಬಂದು ಉಡುಪಿ ಬಸ್ಸು ನಿಲ್ದಾಣ ಪ್ರವೇಶಿಸಬೇಕಾಗಿರುತ್ತದೆ.

ಆದರೆ ಅಂಬಾಗಿಲು-ಕಲ್ಸಂಕ ಮಾರ್ಗದಲ್ಲಿ ಬಸ್ಸುಗಳು ಸಂಚರಿಸದಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿರುವ ಹಿನ್ನೆಲೆ, ಮೇಲೆ ತಿಳಿಸಲಾದ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಅಂಬಾಗಿಲು-ಗುಂಡಿಬೈಲು-ಕಲ್ಸಂಕ ಮಾರ್ಗವಾಗಿ ಉಡುಪಿ ಬಸ್ಸು ನಿಲ್ದಾಣ ತಲುಪುವಂತೆ ಎಲ್ಲಾ ಬಸ್ ಮಾಲೀಕರಿಗೆ ಸೂಚಿಸಲಾಗಿದ್ದು, ತಪ್ಪಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!