ಉಡುಪಿ: ವಿದ್ಯಾ ವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಶನಿವಾರ ಸಂವಿಧಾನ ದಿನಾಚರಣೆ ನಡೆಯಿತು. ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವೇದ ವಾಕ್ಯದಂತೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬಂತೆ ಸಂವಿಧಾನವು 1949 ನವೆಂಬರ್ 26 ರಂದು ಸಮರ್ಪಣೆಯಾಗಿರುತ್ತದೆ. ಸಾಹಿತಿ ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಕಾರ್ಯಕ್ರಮ ಉದ್ಘಾಟಿಸಿದರು.
ಭಾರತ ಸಂವಿಧಾನದ ಬಗ್ಗೆ ಚರ್ಚಾಕೂಟದಲ್ಲಿ ಮಾತನಾಡಿದ ಮಹಾಲಿಂಗ ಕಲ್ಕುಂದ, ಸಂವಿಧಾನ ರಚನೆ ಅಂಗೀಕಾರ ಹಗೂ ಅದು ಒಳಗೊಂಡಿರುವ ಪ್ರಮುಖ ಅಂಶಗಳ ಕುರಿತು ಉಪನ್ಯಾಸ ನೀಡಿದರು. ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪ್ರಥಮ ದರ್ಜೆ ಸಹಾಯಕರಾದ ಪ್ರೇಮ ಎಂ. ನಿರೂಪಿಸಿ ವಂದಿಸಿದರು.