Wednesday, January 22, 2025
Wednesday, January 22, 2025

ದೇಶದ ಸಮಗ್ರತೆಯನ್ನು ಗೌರವಿಸಿ: ವಿದ್ವಾನ್‌ ಗಣಪತಿ ಭಟ್‌

ದೇಶದ ಸಮಗ್ರತೆಯನ್ನು ಗೌರವಿಸಿ: ವಿದ್ವಾನ್‌ ಗಣಪತಿ ಭಟ್‌

Date:

ಉಡುಪಿ: ಕಾರ್ಕಳದ ಕ್ರಿಯೇಟಿವ್‌ ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ನಡೆಯಿತು. ಭಾರತದ ಸಾರ್ವಭೌಮತೆಯ ರಕ್ಷಣೆ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸಲು ಸಂವಿಧಾನದ ರಚನೆಯನ್ನು ಮಾಡಲಾಯಿತು.

ದೇಶದ ಪ್ರಜೆಗಳು ದೇಶದ ಕಾನೂನನ್ನು ಗೌರವಿಸಿ ಮತ್ತು ಸಂವಿಧಾನದ ಆಶಯದಂತೆ ಬದುಕನ್ನು ನಡೆಸಬೇಕು ಎಂದು ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಕರೆ ನೀಡಿದರು. ಸಂವಿಧಾನವನ್ನು ರಚನೆ ಮಾಡಬೇಕಾದರೆ ಅನೇಕ ದೇಶಗಳಲ್ಲಿರುವ ಕಾಯ್ದೆ, ಕಾನೂನುಗಳನ್ನು ಅಳವಾಗಿ ಅಧ್ಯಯನ ನಡೆಸಿ ಎಲ್ಲರಿಗೂ ನ್ಯಾಯ ಸಿಗುವಂತೆ ರಚಿಸಲಾಗಿದೆ.

ಡಾ. ಬಿ ಆರ್‌ ಅಂಬೇಡ್ಕರ್‌ ಅವರನ್ನು ಸಂವಿಧಾನ ರಚನಾ ಕರಡು ಸಮೀತಿಯ ಅಧ್ಯಕ್ಷರನ್ನಾಗಿ ನೇಮಿಸಿ ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ಲಿಖಿತ ಸಂವಿಧಾನವನ್ನು ರಚಿಸಲಾಯಿತು. ಅವರ ಆಶಯಕ್ಕೆ ಅನುಗುಣವಾಗಿ ದೇಶದ ಸಮಗ್ರತೆಯನ್ನು ಗೌರವಿಸಿ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಭವಿಸಬೇಕೆಂದು ಕರೆ ನೀಡಿದರು.

ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಉಪನ್ಯಾಸಕರಾದ ರಾಘವೇಂದ್ರ ಬಿ ರಾವ್‌, ಶಿವಕುಮಾರ್‌, ಉಮೇಶ್‌, ಅಕ್ಷತಾ ಜೈನ್‌, ರಾಮಕೃಷ್ಣ ಹೆಗಡೆ, ಡಾ. ಆದಂ ಶೇಕ್‌, ಸಾರ್ವಜನಿಕ ಸಂಪರ್ಕ ಅಧಿಕಾರಿ ಲಿಶನ್‌ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!