Sunday, January 19, 2025
Sunday, January 19, 2025

ಬಾಳೆಬರೇ ಘಾಟಿ: ಭಾರೀ ವಾಹನಗಳ ಸಂಚಾರ ನಿಷೇಧ

ಬಾಳೆಬರೇ ಘಾಟಿ: ಭಾರೀ ವಾಹನಗಳ ಸಂಚಾರ ನಿಷೇಧ

Date:

ಉಡುಪಿ: ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ಹಾಗೂ ಮಡಿಕೇರಿ-ಸಂಪಾಜೆ ರಸ್ತೆ ಕುಸಿದಿರುವ ಹಿನ್ನೆಲೆ ವಾಹನಗಳ ಸಂಚಾರ ನಿರ್ಬಂಧಿಸಿರುವುದರಿಂದ ಈ ಮಾರ್ಗಗಳಲ್ಲಿ ಸಂಚರಿಸುವ ಸರಕು ಸಾಗಣೆ ವಾಹನಗಳು ಬಾಳೆಬರೇ ಘಾಟ್ ಮೂಲಕ ಸಂಚರಿಸುತ್ತಿದ್ದು, ಅಧಿಕ ಭಾರ ಹೊತ್ತ ವಾಹನಗಳ ಸಂಚಾರದಿಂದ ರಸ್ತೆ, ಸೇತುವೆ ಮತ್ತು ಮೋರಿಗಳು ಹಾನಿಗೊಳ್ಳುವ ಸಂಭವವಿರುವುದರಿಂದ, ಬ್ರಹ್ಮಾವರ-ಜನ್ನಾಡಿ (ಜಿಲ್ಲಾ ಮುಖ್ಯ ರಸ್ತೆ), ಸೋಮೇಶ್ವರ-ಕೋಟೇಶ್ವರ ರಸ್ತೆ (ಜಿ.ಮು.ರ), ವಿರಾಜ್‌ಪೇಟೆ-ಬೈಂದೂರು (ರಾಜ್ಯ ಹೆದ್ದಾರಿ), ಸೌಢ-ಸಿದ್ಧಾಪುರ (ಜಿ.ಮು.ರ) ಹಾಗೂ ತೀರ್ಥಹಳ್ಳಿ-ಕುಂದಾಪುರ ರಸ್ತೆಯಲ್ಲಿ 18,500 ಆರ್.ಎಲ್.ಡಬ್ಲ್ಯೂ ಕ್ಕಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ, ಸದರಿ ಭಾರೀ ವಾಹನಗಳು ರಾಷ್ಟ್ರ‍ೀಯ ಹೆದ್ದಾರಿ 66 ಮೂಲಕ ಕೊಗಾರ್ ಘಾಟಿ-ಸಾಗರವಾಗಿ ಶಿವಮೊಗ್ಗಕ್ಕೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ವಾಹನ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!