Friday, September 27, 2024
Friday, September 27, 2024

ಹಿರಿಯರ ಕನ್ನಡ ಸೇವೆಯು ನಮಗೆ ಮಾದರಿಯಾಗಲಿ: ಡಾ. ಹಿರೇಮಗಳೂರು ಕಣ್ಣನ್‌

ಹಿರಿಯರ ಕನ್ನಡ ಸೇವೆಯು ನಮಗೆ ಮಾದರಿಯಾಗಲಿ: ಡಾ. ಹಿರೇಮಗಳೂರು ಕಣ್ಣನ್‌

Date:

ಉಡುಪಿ: ಕನ್ನಡದ ಕಂಪು ವಿಶ್ವದೆಲ್ಲೆಡೆ ಪಸರಿಸಲು ನಾವು ಕಟಿಬದ್ಧರಾಗಬೇಕು. ಕನ್ನಡದ ನೆಲ, ಜಲ, ಭಾಷೆಗಳು ಉತ್ತುಂಗಕ್ಕೇರಲು ಇಂದಿನ ಯುವ ಪೀಳಿಗೆ ಪ್ರಯತ್ನಿಸಬೇಕು. ನಮ್ಮ ಪೂರ್ವಿಕರು ನಮಗೆ ದೊರಕಿಸಿಕೊಟ್ಟಿರುವ ಈ ಭವ್ಯ ಭಾಷೆ, ಕಲೆ, ಸಂಪತ್ತನ್ನು ವೃದ್ಧಿಸಬೇಕು. ನಮ್ಮಲ್ಲಿರುವ ಪರಸ್ಪರ ದ್ವೇಶಭಾವ ಬಿಟ್ಟು ಒಂದಾಗಬೇಕು. ತಂದೆ-ತಾಯಿಯವರನ್ನು ಪ್ರೀತಿಯಿಂದ ಸಲಹಬೇಕು. ಹಾಗೆಯೇ ನಮ್ಮ ಮಾತೃಭೂಮಿ ತಾಯಿ ಭಾಷೆಯನ್ನು ಬೆಳೆಸಬೇಕು ಎಂದು ಕನ್ನಡದ ಪೂಜಾರಿ ಡಾ. ಹಿರೇಮಗಳೂರು ಕಣ್ಣನ್‌ ಕರೆ ನೀಡಿದರು.

ಅವರು ನವೆಂಬರ್‌ 29 ರಂದು ಕಾರ್ಕಳದ ಕ್ರಿಯೇಟಿವ್‌ ಪದವಿಪೂರ್ವ ಕಾಲೇಜಿನಲ್ಲಿ ನಡೆದ ‘ಕ್ರಿಯೇಟಿವ್‌ ನುಡಿಹಬ್ಬ-2022’ ಉದ್ಘಾಟಿಸಿ ‘ನಿನಾದ’ ತ್ರೈಮಾಸಿಕ ಪತ್ರಿಕೆಯ ಎರಡನೇ ಸಂಚಿಕೆಯನ್ನು ಬಿಡುಗಡೆಗೊಳಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಆರೋಗ್ಯಪೂರ್ಣವಾದ ಮನಸ್ಸು ಪಡೆಯಲು ಕ್ರಿಯಾಶೀಲ ಚಟುವಟಿಕೆಗಳು ಪೂರಕ. ಸತ್ಯದ ಒಸರನ್ನು ಹುಡುಕುವ ಕಡೆಗೆ ಸದಾ ಮನಸ್ಸು ತುಡಿಯುತ್ತಿರಲಿ ಎಂದು ಹಾರೈಸಿದರು.

ಕ್ರಿಯೇಟಿವ್‌ ಕಾಲೇಜಿನಲ್ಲಿ ವಾಣಿಜ್ಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ರಾಘವೇಂದ್ರ ಬಿ ರಾವ್‌ ಅವರ ‘ಬೊಂಬಿನ ಬೇಲಿ’ ಕೃತಿಯನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಮಾತನಾಡಿ, ವಿದ್ಯಾರ್ಥಿಗಳು ಸಾಹಿತ್ಯ ಕ್ಷೇತ್ರದೆಡೆಗೆ ಮತ್ತು ಮೌಲ್ಯಯುತ ವಿಚಾರಗಳನ್ನು ತಿಳಿಯಲು ಆಸಕ್ತರಾಗಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥಾಪಕರಲ್ಲೊಬ್ಬರಾದ ಅಮೃತ್‌ ರೈ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಸಾಹಿತ್ಯ ಚಟುವಟಿಕೆ ಮತ್ತು ಕಾರ್ಯಕ್ರಮಗಳು ಎಲ್ಲ ಕಡೆಯಲ್ಲೂ ನಡೆಯುವಂತಾಗಲಿ ಎಂದು ಆಶಿಸಿದರು.

ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ, ಆದರ್ಶ ಎಂ ಕೆ., ವಿಮಲ್‌ ರಾಜ್‌, ಕ್ರಿಯೇಟಿವ್‌ ಪದವಿಪೂರ್ವ ಕಾಲೇಜು ಉಡುಪಿಯ ಪ್ರಾಂಶುಪಾಲರಾದ ಸ್ಟಾನಿ ಲೋಬೊ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿನಾಯಕ ಜೋಗ್‌ ಬಹುಮಾನಿತರ ಪಟ್ಟಿ ವಾಚಿಸಿದರು.

ಸಂಸ್ಥಾಪಕರಾದ ಅಶ್ವಥ್‌ ಎಸ್‌ ಎಲ್‌ ಪ್ರಾಸ್ತಾವಿಕ ಮಾತನ್ನಾಡಿ ಸ್ವಾಗತಿಸಿ, ಲೋಹಿತ್‌ ಎಸ್‌ ಕೆ ವಂದಿಸಿದರು. ರಾಮಕೃಷ್ಣ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಕ್ರೀಡಾಕೂಟ: ಶಾರದಾ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಉಡುಪಿ, ಸೆ.27: ಉಡುಪಿ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ...

ಫಲಕ ಉದ್ಘಾಟನೆ

ಉಡುಪಿ, ಸೆ.27: ಆಮ್ ಕೇರ್ ಕ್ಲಿನಿಕ್, ರೋಟರಿ ಉಡುಪಿ ಮತ್ತು ಇನ್ನರ್...

‘ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ-2024ಕ್ಕೆ’ ಮೂವರು ಹಿರಿಯ ಸಾಹಿತಿಗಳ ಆಯ್ಕೆ

ಉಡುಪಿ, ಸೆ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್...

ಜಿಲ್ಲಾಮಟ್ಟದ ಟೆನ್ನಿಕಾಯ್ಟ್: ಸರಸ್ವತಿ ವಿದ್ಯಾಲಯ ಪ್ರಥಮ

ಗಂಗೊಳ್ಳಿ, ಸೆ.26: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ...
error: Content is protected !!