Tuesday, January 21, 2025
Tuesday, January 21, 2025

ಉಡುಪಿ ಜ್ಞಾನಸುಧಾ ಸಹಯೋಗದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ

ಉಡುಪಿ ಜ್ಞಾನಸುಧಾ ಸಹಯೋಗದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ

Date:

ಉಡುಪಿ: ವಿದ್ಯಾರ್ಥಿ ದೆಸೆಯಲ್ಲಿ ಕ್ರೀಡಾಸ್ಫೂರ್ತಿಯನ್ನು ತುಂಬುವುದು ಅಗತ್ಯ. ಹೊಸತನದ ಚಿಂತನೆಯೊಂದಿಗೆ, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಪದವಿಪೂರ್ವ ವಿಭಾಗದಲ್ಲಿ ನಡೆಯುತ್ತಿರುವ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ದಾಖಲಾಗುವ ಕೂಟ ದಾಖಲೆಯನ್ನು ಸಮತೂಕವಾಗಿ ದಾಖಲಿಸುವ ನಿಟ್ಟಿನಲ್ಲಿ ಫೋಟೋ ಫಿನಿಶಿಂಗ್ ಬಳಸುತ್ತಿರುವುದು ಅಭಿನಂದನಾರ್ಹ ಎಂದು ಶಾಸಕ ಕೆ.ರಘಪತಿ ಭಟ್ ಹೇಳಿದರು.

ಅವರು ಕರ್ನಾಟಕ ಸರ್ಕಾರ ಪದವಿಪೂರ್ವ ಶಿಕ್ಷಣ ಇಲಾಖೆ, ರಜತ್ರಾದಿ,ಮಣಿಪಾಲ, ಉಡುಪಿ, ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜು ನಾಗಬನ ಕ್ಯಾಂಪಸ್ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇಲ್ಲಿ ಆಯೋಜಿಸಿದ್ದ 2022-23 ಸಾಲಿನ ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ಕ್ರೀಡಾಳುಗಳಿಗೆ ಶುಭ ಹಾರೈಸಿ, ರಾಜ್ಯದಲ್ಲಿ ಮೂರು ಅಥ್ಲೆಟಿಕ್ಸ್ ಲ್ಯಾಬ್ ಗಳು ಆರಂಭವಾಗುತ್ತಿದ್ದು ಅದರಲ್ಲಿ ಒಂದು ಉಡುಪಿಯಲ್ಲಿ ಆರಂಭವಾಗುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ದಿ ಮೈಸೂರು ಎಲೆಕ್ಟ್ರಿಕ್ ಇಂಡಸ್ಟೀಸ್ ಲಿಮಿಟೆಡ್ ಬೆಂಗಳೂರು ಇವರ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಮಾತನಾಡಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ, ಶಿಸ್ತು, ಸಮಯ ಪರಿಪಾಲನೆ ಮಾತ್ರವಲ್ಲದೆ ಕ್ರೀಡಾ ಕ್ಷೇತ್ರದಲ್ಲಿಯೂ ಅತ್ಯುತ್ತಮ ಸಾಧನೆಯನ್ನು ಮಾಡುತ್ತಿದೆ.

ಕ್ರೀಡಾಳುಗಳು ಸೋಲು ಗೆಲುವಿನ ಲೆಕ್ಕಾಚಾರಕ್ಕಿಂತಲೂ ಭಾಗವಹಿಸುವಿಕೆಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಬೇಕು ಎಂದರು. ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಕ್ರೀಡಾಳುಗಳಿಗೆ ಶುಭ ಹಾರೈಸಿ, ಈ ಬಾರಿ ಫೊಟೋ ಫಿನಿಶಿಂಗ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಇಂದಿನ ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗಗಳಲ್ಲಿ ದಾಖಲಾಗುವ ಕೂಟ ದಾಖಲೆಯನ್ನು, 2023-24ರಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮುರಿಯುವ ಕ್ರೀಡಾ ಸಾಧಕರಿಗೆ ತಲಾ ರೂ. 2,000 ನಗದು ಬಹುಮಾನವನ್ನು ಅಜೆಕಾರ್ ಪದ್ಮಗೋಪಾಲ್ ಟ್ರಸ್ಟ್ ವತಿಯಿಂದ ನೀಡಲಾಗುವುದು ಎಂದು ಸಭೆಯಲ್ಲಿ ಘೋಷಿಸಿದರು.

ಕ್ರೀಡಾಳುಗಳು ಕೇವಲ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳಿಗಷ್ಟೇ ಸೀಮಿತವಾಗಿರದೆ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಹೆಮ್ಮೆಯನ್ನು ತರುವ ಕ್ರೀಡಾಳುಗಳಾಗಿ ರೂಪುಗೊಳ್ಳಬೇಕು
ಎಂದರು.

ಯುವ ಸಬಲೀಕರಣ ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಸಹಾಯಕ ನಿರ್ದೇಶಕ ಡಾ.ರೋಷನ್ ಕುಮಾರ್ ಶೆಟ್ಟಿ, ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆ ಬೆಂಗಳೂರು ಕಾರ್ಯದರ್ಶಿ ಎ ರಾಜವೇಲು, ಪದವಿಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಅಧ್ಯಕ್ಷರಾದ ಜೀವನ್ ಕುಮಾರ್ ಶೆಟ್ಟಿ, ಕ್ರೀಡಾ ಸಂಯೋಜಕ ದಿನೇಶ್ ಕುಮಾರ್ ಎ, ಉಡುಪಿ ಜ್ಞಾನಸುಧಾ ಪಿ.ಯು. ಕಾಲೇಜು ನಾಗಬನ ಕ್ಯಾಂಪಸ್ ಪ್ರಾಂಶುಪಾಲ ಗಣೇಶ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಸ್ವಾಗತಿಸಿ, ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು ವಂದಿಸಿದರು. ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!