ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಿಕ್ಷಾಟನೆ ನಿರತ ಮಕ್ಕಳ ರಕ್ಷಣೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಪುರಸಭೆ, ನಗರಸಭೆ, ನಾಗರಿಕ ಸಮಿತಿ ಸಂಯುಕ್ತ ಆಶ್ರಯದಲ್ಲಿ ಸಂತೆ ಮಾರ್ಕೆಟ್ ಗಳಲ್ಲಿ, ಉಡುಪಿ ಬಸ್ ನಿಲ್ದಾಣಗಳಲ್ಲಿ, ಹಾಗೂ ಸುತ್ತಮುತ್ತಲಿನ ದೇವಸ್ಥಾನಗಳ ಬಳಿ ಜಂಟಿಯಾಗಿ ಕಾರ್ಯಚರಣೆಯನ್ನು ನಡೆಸಿದ್ದು ಈ ಸಂದರ್ಭದಲ್ಲಿ ಹಣ್ಣು ವ್ಯಾಪಾರದಲ್ಲಿ ತೊಡಗಿದ್ದ ಓರ್ವ ಬಾಲಕನನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಯಿತು.
ಕಾರ್ಯಾಚರಣೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್., ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು ರಮೇಶ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ, ಕ್ಷೇತ್ರ ಶಿಕ್ಷಣ ಸಂಯೋಜಕ ಶಂಕರ್, ನಗರಸಭೆ ಅಧಿಕಾರಿ ನಾಗರಾಜ್, ಅಮೃತ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಸಿಬ್ಬಂದಿಗಳಾದ ಶ್ರುತಿ, ನಾಗರತ್ನ, ನಾಗರಿಕ ಸಮಿತಿಯ ಮುಖ್ಯಸ್ಥರಾದ ನಿತ್ಯಾನಂದ ಒಳಕಾಡು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಲೋಚಕಿ ಅಂಬಿಕಾ, ಸಮಾಜ ಕಾರ್ಯಕರ್ತೆ ಸುರಕ್ಷಾ, ಔಟ್ ರೀಚ್ ಕಾರ್ಯಕರ್ತ ಸಂದೇಶ್ ಹಾಗೂ ಸುನಂದ ಭಾಗವಹಿಸಿದ್ದರು.