Tuesday, July 28, 2026
Tuesday, July 28, 2026

ಅ.10- ಸೇವೆ ಮತ್ತು ಸಮರ್ಪಣ ಅಭಿಯಾನದ ಸಮಾರೋಪ: ಕುಯಿಲಾಡಿ ಸುರೇಶ್ ನಾಯಕ್

ಅ.10- ಸೇವೆ ಮತ್ತು ಸಮರ್ಪಣ ಅಭಿಯಾನದ ಸಮಾರೋಪ: ಕುಯಿಲಾಡಿ ಸುರೇಶ್ ನಾಯಕ್

Date:

ಉಡುಪಿ: ಸೆ.17ರಿಂದ ಅ.7ರ ವರೆಗೆ ಜಿಲ್ಲೆಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದ ‘ಸೇವೆ ಮತ್ತು ಸಮರ್ಪಣ ಅಭಿಯಾನ’ದ ಸಮಾರೋಪ ಸಭೆಯು ಅ.10 ರವಿವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಮಾರೋಪ ಸಭೆಯನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭಿಯಾನದ ಸಮಾರೋಪ ಸಭೆಯ ಬಳಿಕ ಜಿಲ್ಲಾ ಬಿಜೆಪಿ, ಜಿಲ್ಲಾ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ, ಜಿಲ್ಲಾ ಮಹಿಳಾ ಮೋರ್ಚಾ ಮತ್ತು ಜಿಲ್ಲಾ ಯುವ ಮೋರ್ಚಾ ಸಂಯೋಜನೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಪಣಿಯೂರು ನೇತೃತ್ವದ ತಂಡದ ಹಿಮ್ಮೇಳದಲ್ಲಿ ಭೀಷ್ಮ ವಿಜಯ ಯಕ್ಷಗಾನ ತಾಳಮದ್ದಲೆ ಪ್ರದರ್ಶನ ನಡೆಯಲಿದೆ.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು, ಸೇವೆ ಮತ್ತು ಸಮರ್ಪಣ ಅಭಿಯಾನದ ಜಿಲ್ಲಾ ಸಂಚಾಲಕರು, ಅಭಿಯಾನದ 9 ಕಾರ್ಯಕ್ರಮಗಳ ಜಿಲ್ಲಾ ಮತ್ತು ಮಂಡಲಗಳ ಸಂಚಾಲಕರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!