Monday, January 20, 2025
Monday, January 20, 2025

ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ: ಡಾ. ಶರತ್ ರಾವ್

ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ: ಡಾ. ಶರತ್ ರಾವ್

Date:

ಉಡುಪಿ: ಪ.ಪೂ. ಶಿಕ್ಷಣ ಇಲಾಖೆ ಮತ್ತು ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ.ಪೂ. ವಿದ್ಯಾರ್ಥಿಗಳ ಕ್ರೀಡಾಕೂಟದ ಸಮಾರೋಪ ಸಮಾರಂಭ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.

ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂದಿನ ವರ್ಷದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಈ ವರ್ಷದ ದಾಖಲೆಗಳನ್ನು ಮುರಿದವರಿಗೆ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ (ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು)ನ ವತಿಯಿಂದ ತಲಾ ಎರಡು ಸಾವಿರ ನಗದು ಬಹುಮಾನವನ್ನು ಘೋಷಿಸಿ ಇಲ್ಲಿನ ಪದಕ ವಿಜೇತರು ಮುಂದಿನ ದಿನಗಳಲ್ಲಿ ರಾಜ್ಯ, ರಾಷ್ಟ್ರ ಹಾಗೂ ಒಲಿಂಪಿಕ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾಗಲಿ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಮಣಿಪಾಲ ಕೆಎಂಸಿ ಡೀನ್ ಡಾ. ಶರತ್ ರಾವ್ ಮಾತನಾಡಿ, ಕ್ರೀಡೆ ಮಕ್ಕಳ ದೈಹಿಕ ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದೆ ಅಲ್ಲದೆ ಇಲ್ಲಿ ಬರುವ ಸೋಲು ಗೆಲುವುಗಳು ನಮ್ಮ ಮುಂದಿನ ಜೀವನದಲ್ಲಿ ಸವಾಲುಗಳನ್ನು ಎದುರಿಸಲು ಪಾಠವಾಗಬೇಕು.

ಗೆದ್ದವರಿಗೆ ಅಭಿನಂದನೆಯನ್ನು ಸಲ್ಲಿಸುತ್ತಾ ಸೋತವರು ಪ್ರಯತ್ನ ಕೈ ಬಿಡದೆ ಶ್ರದ್ಧೆಯಿಂದ ಅಭ್ಯಾಸ ಮುಂದುವರಿಸಿದಲ್ಲಿ ಖಂಡಿತ ಯಶಸ್ಸು ಸಿಗುತ್ತದೆ. ಕ್ರೀಡೆ ಮತ್ತು ಇತರ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಸಾಮಾಜಿಕ ಬದುಕಿಗೆ ಅಣಿಗೊಳಿಸುತ್ತದೆ ಎಂದರು.

ಮುಖ್ಯ ಅತಿಥಿ ಸಹಕಾರಿ ರತ್ನ ಪ್ರಶಸ್ತಿ ವಿಜೇತರಾದ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಮೀನು ಮಾರಾಟಗಾರರ ಫೆಡರೇಷನ್ ಅಧ್ಯಕ್ಷರಾದ ಯಶಪಾಲ್ ಎ ಸುವರ್ಣ ಮಾತನಾಡಿ ಪಠ್ಯ ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲೂ ಜೊತೆಜೊತೆಗೆ ಅವಕಾಶ ಕಲ್ಪಿಸಿಕೊಡುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಪ.ಪೂ.ಶಿಕ್ಷಣ ಇಲಾಖೆಯ ಜೊತೆ ಕೈ ಜೋಡಿಸಿ ಕ್ರೀಡಾಕೂಟವನ್ನು ಆಯೋಜನೆ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ.

ನೂರನಲ್ವತ್ತು ಕೋಟಿ ಜನಸಂಖ್ಯೆಯುಳ್ಳ ನಮ್ಮ ಭಾರತ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಇನ್ನಷ್ಟು ಸಾಧಿಸಬೇಕಾದ ಅವಶ್ಯಕತೆಯಿದೆ ಎಂದರು. ಉಡುಪಿ ಎಂ.ಜಿ. ಎಂ. ಪದವಿಪೂರ್ವ ಕಾಲೇಜು ಸಮಗ್ರ
ತಂಡ ಪ್ರಶಸ್ತಿ ಪಡೆಯಿತು.

ಬಾಲಕರ ವಿಭಾಗದಲ್ಲಿ ನಿಟ್ಟೆ ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ಕುಲ್‌ದೀಪ್ ಕುಮಾರ್ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಪಡೆದರು. ಬಾಲಕಿಯರ ವಿಭಾಗದಲ್ಲಿ ನಿಟ್ಟೆ ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ನಂದಿನಿ ಹಾಗು ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಮಾಧರ‍್ಯ ಇವರಿಬ್ಬರು ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಪಡೆದರು.

ಯುವ ಸಬಲೀಕರಣ ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇದರ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ, ಪ.ಪೂ.ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಕುಮಾರ್ ಎ., ಉಡುಪಿ ಜಿಲ್ಲಾ ಪ.ಪೂ ದೈಹಿಕ ಶಿಕ್ಷಣ ಉಪನ್ಯಾಸಕ ಸಂಘದ ಅಧ್ಯಕ್ಷರಾದ ಜೀವನ್ ಕುಮಾರ್ ಶೆಟ್ಟಿ, ಉಡುಪಿ ಜ್ಞಾನಸುಧಾ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಕಳ ಜ್ಞಾನಸುಧಾ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರು ಸ್ವಾಗತಿಸಿ, ಪ.ಪೂ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕ್ರೀಡಾ ಸಂಯೋಜಕರಾದ ದಿನೇಶ್ ಕುಮಾರ್ ಎ ವಂದಿಸಿದರು. ಕಾರ್ಕಳ ಜ್ಞಾನಸುಧಾ ಪ.ಪೂ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಸಂಗೀತ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!