Monday, January 20, 2025
Monday, January 20, 2025

ಸಾರ್ವಜನಿಕರು ಏಡ್ಸ್ ಬಗ್ಗೆ ಜಾಗೃತಿ ವಹಿಸಬೇಕು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಸಾರ್ವಜನಿಕರು ಏಡ್ಸ್ ಬಗ್ಗೆ ಜಾಗೃತಿ ವಹಿಸಬೇಕು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ: ಏಡ್ಸ್ ರೋಗದ ಬಗ್ಗೆ ಜಾಗೃತರಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿದಾಗ ಮಾತ್ರ ಈ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಗುರುವಾರ ನಗರದ ಮಿನಿ ಟೌನ್ ಹಾಲ್‌ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿದ್ಯಾರತ್ನ ಸ್ಕೂಲ್ & ಕಾಲೇಜ್ ಆಫ್ ನರ್ಸಿಂಗ್, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ರೆಡ್‌ಕ್ರಾಸ್ ಮತ್ತು ಎನ್.ಎಸ್.ಎಸ್ ಘಟಕ ಉದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಏಡ್ಸ್ ದಿನ, ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೆಚ್.ಐ.ವಿ/ಏಡ್ಸ್ ಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡುವುದರ ಮೂಲಕ, ಶೀಘ್ರದಲ್ಲಿ ರೋಗವನ್ನು ಪತ್ತೆ ಹಚ್ಚಿ ಚಿಕಿತ್ಸೆ ಆರಂಭಿಸುವುದರಿAದ ರೋಗ ಹರಡುವುದನ್ನು ತಡೆಯಬಹುದಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದರು.

ಉಡುಪಿ ಜಿಲ್ಲೆಯಲ್ಲಿ ನಿಗದಿತ ಗುರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಪಾಸಿಟಿವಿಟಿ ರೇಟ್ ಕೂಡ ಕಡಿಮೆಯಿದೆ. ಸ್ವಯಂ ಸೇವಾ ಸಂಸ್ಥೆಗಳು, ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಹೆಚ್.ಐ.ವಿ ಏಡ್ಸ್ ಕುರಿತ ಸಂಶಯಗಳು ಮತ್ತು ಊಹಾಪೋಹಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1097 ಮೂಲಕ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಳ್ಳಬಹುದು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಸಂವಿಧಾನ ಪೀಠಿಕೆ ಬೋಧಿಸಿದರು.

ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ವಿದ್ಯಾರತ್ನಾ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ಅನಿತಾ ಸಿ ರಾವ್, ಲಯನ್ಸ್ ಕ್ಲಬ್ ಅಧ್ಯಕ್ಷ ರಮೇಶ್ ಕೆ ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲೆಯಲ್ಲಿ ಹೆಚ್.ಐ.ವಿ/ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.

ಬೋರ್ಡ್ ಹೈಸ್ಕೂಲ್‌ನಿಂದ ಉಡುಪಿ ಪುರಭವನದವರೆಗೆ ಜಾಥಾ ನಡೆಯಿತು. ಹೆಚ್.ಐ.ವಿ/ಏಡ್ಸ್ ಕುರಿತು ರೇಣುಕಾಮಾತೆ ತೊಗಲು ಗೊಂಬೆ ಕಲಾತಂಡದಿಂದ ತೊಗಲು ಗೊಂಬೆ ಪ್ರದರ್ಶನ ನಡೆಯಿತು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು ಸ್ವಾಗತಿಸಿ, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ವಂದಿಸಿದರು. ಮಂಜುನಾಥ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!