Friday, September 20, 2024
Friday, September 20, 2024

ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್- ಕಿರುನಾಟಕ ಪ್ರದರ್ಶನ

ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್- ಕಿರುನಾಟಕ ಪ್ರದರ್ಶನ

Date:

ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್) ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾದತ್ ಹಸನ್ ಮಂಟೋ, ಹೆರಾಲ್ಡ್ ಪಿಂಟರ್ ಮತ್ತು ಸುರೇಂದ್ರ ವರ್ಮಾ ಅವರ ಮೂರು ಕಿರುನಾಟಕಗಳು ಆಧುನಿಕ ಜೀವನದ ಸಂಕೀರ್ಣತೆಯ ಬಗ್ಗೆ ಪ್ರೇಕ್ಷಕರನ್ನು ಯೋಚಿಸುವಂತೆ ಮಾಡಿತು.

ಮೂರು ಕಿರುನಾಟಕಗಳಾದ ಉಪರ್ ನೀಚೆ ಔರ್ ದರ್ಮಿಯಾನ್ (ಸಾದತ್ ಹಸನ್ ಮಂಟೋ), ವಿಕ್ಟೋರಿಯಾ ಸ್ಟೇಷನ್ (ಹೆರಾಲ್ಡ್ ಪಿಂಟರ್), ನೀಂದ್ ಕ್ಯುನ್ ರಾತ್ ಭರ್ ನಹಿ ಆತಿ(ಸುರೇಂದ್ರ ವರ್ಮ)ನ್ನು ರಂಗ ನಿರ್ದೇಶಕರಾದ ಅಭಿನವ್ ಗ್ರೋವರ್ ನಿರ್ದೇಶಿಸಿದ್ದು ಎರಡನೇ ವರ್ಷದ ಬಿಎ (ಎಸ್ಥೆಟಿಕ್ಸ್ ಅಂಡ್ ಪೀಸ್ ಸ್ಟಡೀಸ್) ವಿದ್ಯಾರ್ಥಿಗಳಾದ- ವೆಲಿಕಾ, ಚಿನ್ಮಯಿ ಬಾಲ್ಕರ್, ಆಲಿಸ್ ಚೌಹಾಣ್, ಶ್ರವಣ್ ಬಾಸ್ರಿ, ಆಕರ್ಷಿಕಾ ಸಿಂಗ್, ಸಾತ್ವಿಕ್ ಜೋಷಿ ಮತ್ತು ಸುಹಾನಿ ನಟಿಸಿದ್ದಾರೆ. ಶ್ರುತಿ ಬಂಗೇರ ಬೆಳಕು, ಸಂಪದ ಭಾಗವತರ ಸಂಗೀತ ನೀಡಿದ್ದರು.

ಪ್ರದರ್ಶನದ ನಂತರ ನಡೆದ ಚರ್ಚೆಯಲ್ಲಿ ಭಾಗವಹಿಸಿದ ರಂಗನಿರ್ದೇಶಕ ಅಭಿನವ್ ಗ್ರೋವರ್, ಮೂರು ನಾಟಕಗಳ ವಿಷಯಗಳು ಪ್ರಾಥಮಿಕವಾಗಿ ಆಧುನಿಕ ಬದುಕಿನ ಸಂದಿಗ್ಧತೆಗಳ ಬಗ್ಗೆ ಎಲ್ಲರೂ ಯೋಚಿಸುವಂತೆ ಮಾಡುವ ಉದ್ದೇಶವನ್ನು ಹೊಂದಿವೆ ಎಂದರು.

ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಮಾತನಾಡಿ, ‘ಅಭಿನಯ ಮತ್ತು ರಂಗಭೂಮಿಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವಂತೆ ಮಾಡುವ ಪ್ರಯತ್ನ ಇದಾಗಿದೆ ಎಂದರು. 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಇತರರು ನಾಟಕಗಳನ್ನು ವೀಕ್ಷಿಸಿ, ಚರ್ಚೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!