Wednesday, September 9, 2026
Wednesday, September 9, 2026

ಡಾ. ಉದಯ ಶೆಟ್ಟಿ ಅವರಿಗೆ ರಾಜ್ಯಮಟ್ಟದ ಸೇವಾ ಪ್ರಶಸ್ತಿ

ಡಾ. ಉದಯ ಶೆಟ್ಟಿ ಅವರಿಗೆ ರಾಜ್ಯಮಟ್ಟದ ಸೇವಾ ಪ್ರಶಸ್ತಿ

Date:

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇಲ್ಲಿ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಪಕರಾಗಿರುವ ಡಾ. ಉದಯ ಶೆಟ್ಟಿ ಕೆ ಇವರಿಗೆ ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ 5 ವರ್ಷಗಳ ಸೇವಾ ಪ್ರಶಸ್ತಿ ನೀಡಿ ಗೌರವಿಸಿದೆ. ಇವರು ಕಳೆದ ಹಲವಾರು ವರ್ಷಗಳಿಂದ ಸ್ಕೌಟ್ಸ್ ಗೈಡ್ಸ್ ಸೇವಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದು, ಸ್ಕೌಟ್ಸ್ ರೋವರ್ ವಿಭಾಗದಲ್ಲಿ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯನ್ನು ಮಧ್ಯಪ್ರದೇಶದ ಸ್ಕೌಟ್ ಕೇಂದ್ರ ಸಂಸ್ಥೆಯಲ್ಲಿ ಪಡೆದಿರುತ್ತಾರೆ.

ಇವರು ರಾಜ್ಯ ಮಟ್ಟದ ಹಲವು ತರಬೇತಿ ಶಿಬಿರಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದಾರೆ. ಜಿಲ್ಲಾ ಮಟ್ಟದ ಹಲವು ತರಬೇತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುತ್ತಾರೆ. ಉಡುಪಿ ಪರ್ಯಾಯ, ಕಾರ್ಕಳ ಬಾಹುಬಲಿ ಮಸ್ತಕಾಭಿಷೇಕ ಸೇರಿದಂತೆ ಹಲವು ಸೇವಾ ಶಿಬಿರಗಳಲ್ಲಿ ಭಾಗವಹಿಸಿ ಸ್ಕೌಟ್ ಗೈಡ್ ಸಂಘಟನೆಗೆ ನೀಡಿರುವ ಕೊಡುಗೆಯನ್ನು ಗುರುತಿಸಿ ರಾಜ್ಯಮಟ್ಟದ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!