Monday, January 20, 2025
Monday, January 20, 2025

ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೊಸ ದಿಕ್ಸೂಚಿ

ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೊಸ ದಿಕ್ಸೂಚಿ

Date:

ಉಡುಪಿ: ಉಡುಪಿ ಜಿಲ್ಲೆ ರಚನೆಯಾಗಿ 25 ವರ್ಷಗಳಾಗಿದ್ದು, ಮುಂದಿನ 25 ವರ್ಷಗಳಲ್ಲಿ, ಜಿಲ್ಲೆಯನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿಪಡಿಸುವ ಯೋಜನೆಗಳ ಕುರಿತಂತೆ ದಿಕ್ಸೂಚಿಯನ್ನು ರಚಿಸಿ, ಅದರಂತೆ ಕಾರ್ಯನಿರ್ವಹಿಸುವ ಮೂಲಕ ಬಲಿಷ್ಠ ಮತ್ತು ಸಮೃದ್ಧ ಉಡುಪಿ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕಾರ್ಯನಿರ್ವಹಿಸಬೇಕಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಹೇಳಿದರು.

ಅವರು ಶನಿವಾರ ಪುರಭವನದಲ್ಲಿ, ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಉಡುಪಿ ಜಿಲ್ಲಾ ರಜತ ಮಹೋತ್ಸವದ ಅಂಗವಾಗಿ ದಿಕ್ಸೂಚಿ ಸುವರ್ಣ ಉಡುಪಿಗೆ ರಜತ ಉಡುಪಿಯ ಪರಿಕಲ್ಪನೆ – ಎರಡು ದಿನಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯು ರಾಜ್ಯದ ಇತರೇ ಎಲ್ಲಾ ಜಿಲ್ಲೆಗಳಿಗಿಂತ ವಿಭಿನ್ನವಾಗಿದ್ದು, ಇಲ್ಲಿನ ನಾಗರೀಕರ ಸಹಕಾರ ಮತ್ತು ಜನಪ್ರತಿನಿಧಿಗಳ ಕಾರ್ಯಗಳಿಂದ ಅಭಿವೃದ್ಧಿಯ ಪಥದಲ್ಲಿದೆ. ಮುಂದಿನ 25 ವರ್ಷಗಳಲ್ಲಿ ಜಿಲ್ಲೆಯು ಆರೋಗ್ಯ, ಶಿಕ್ಷಣ, ಪ್ರವಾಸೋದ್ಯಮ, ಕೃಷಿ, ಕೈಗಾರಿಕೆ, ಮೀನುಗಾರಿಕೆ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ಸಾಧಿಸಬೇಕಾದ ಪ್ರಗತಿಯ ಕುರಿತಂತೆ, ಜಿಲ್ಲೆಯ ಹಿರಿಯ ಅಧಿಕಾರಿಗಳು, ವಿವಿಧ ಕ್ಷೇತ್ರಗಳ ತಜ್ಞರು, ಸಾರ್ವಜನಿಕರೊಂದಿಗೆ ಚರ್ಚೆಗಳನ್ನು ನಡೆಸಿ, ಎಲ್ಲರ ಅಭಿಪ್ರಾಯಗಳನ್ನು ಕ್ರೋಢೀಕರಿಸಿ, ಅದರಂತೆ ಕಾರ್ಯನಿರ್ವಹಿಸಬೇಕು. ಪ್ರಧಾನಮಂತ್ರಿ ಅವರ ನವಭಾರತ ಕಲ್ಪನೆಯಂತೆ, ನವ ಕರ್ನಾಟಕ ಸಂಕಲ್ಪದೊಂದಿಗೆ, ಉಡುಪಿ ಜಿಲ್ಲೆಯು ಎಲ್ಲಾ ವಿಭಾಗಗಳಲ್ಲಿ ಪ್ರಗತಿಯನ್ನು ಸಾಧಿಸುವಂತಾಗಬೇಕು ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಭವಿಷ್ಯದ ಪ್ರಗತಿಯ ದೃಷ್ಠಿಯಿಂದ ಉಡುಪಿ ಜಿಲ್ಲೆಗೆ ಒಂದು ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತೆಯ ಅಗತ್ಯವಿದೆ. ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ 25 ಎಕ್ರೆ ಜಾಗವನ್ನು ಇದಕ್ಕಾಗಿ ಮೀಸಲಿಡಬೇಕು. ಯುವ ಜನತೆಗಾಗಿ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಸೃಷ್ಠಿಯಾಗಬೇಕು. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅಗತ್ಯವಿರುತ ತರಬೇತಿ ಹಾಗೂ ಸಂವಹನ ಕೌಶಲ್ಯಗಳ ಬಗ್ಗೆ ತರಬೇತಿ ನೀಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಅತ್ಯಂತ ಹೆಚ್ಚಿನ ಅವಕಾಶಗಳಿದ್ದು, ಇವುಗಳ ಸದ್ಬಳಕೆ ಆಗಬೇಕು. ಕೃಷಿ, ಪ್ರವಾಸೋದ್ಯಮ ಮತ್ತು ಮೀನುಗಾರಿಕೆಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಮುಂದಿನ 25 ವರ್ಷಗಳಲ್ಲಿ ಜಿಲ್ಲೆಯನ್ನು ಆರ್ಥಿಕವಾಗಿ ಸ್ವಾವಲಂಭಿಯನ್ನಾಗಿಸಿ, ಪ್ರಗತಿಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದರು.

ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಅರ್ ನಾಯಕ್, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಜಿಲ್ಲೆಯ ಮೊದಲ ಜಿಲ್ಲಾಧಿಕಾರಿ ಕಲ್ಪನಾ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!