Tuesday, November 26, 2024
Tuesday, November 26, 2024

ಮಾನಸಿಕ ಸ್ವಾಸ್ಥ್ಯ ಕಂಡುಕೊಳ್ಳಲು ಕ್ರೀಡೆಗಳು ಸಹಕಾರಿ: ಸವಿತಾ ಪಿ ದೇವಾಡಿಗ

ಮಾನಸಿಕ ಸ್ವಾಸ್ಥ್ಯ ಕಂಡುಕೊಳ್ಳಲು ಕ್ರೀಡೆಗಳು ಸಹಕಾರಿ: ಸವಿತಾ ಪಿ ದೇವಾಡಿಗ

Date:

ಬ್ರಹ್ಮಾವರ: ಮಹಾತ್ಮಾ ಗಾಂಧಿ ಪ್ರೌಢಶಾಲೆ ಸಾಯ್ಬ್ರಕಟ್ಟೆ ಇದರ 2022-23ನೆಯ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಯಡ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತಾ ಪಿ ದೇವಾಡಿಗ ಉದ್ಘಾಟಿಸಿದರು. ಪಠ್ಯದೊಂದಿಗೆ ಕ್ರೀಡೆಗಳೂ ಜೀವನದಲ್ಲಿ ಮುಖ್ಯ. ಮಾನಸಿಕ ಸ್ವಾಸ್ಥ್ಯ ಕಂಡುಕೊಳ್ಳಲು ಕ್ರೀಡೆಗಳು ಸಹಕಾರಿ ಎಂದರು.

ಅಭ್ಯಾಗತರಾಗಿ ಸಂಸ್ಥೆಯ ಹಳೆ ವಿದ್ಯಾರ್ಥಿ ಹಾಗೂ ಯಡ್ತಾಡಿ ಗ್ರಾಮ ಪಂಚಾಯತ್ ಸದಸ್ಯ ಅಮೃತ್ ಪೂಜಾರಿ ಕ್ರೀಡಾ ಜ್ಯೋತಿ ಬೆಳಗಿಸಿ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಹಾಗೂ ಉದ್ಯಮಿ ಶರತ್ ಕುಮಾರ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.

ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಶಿಕ್ಷಕ ಸತೀಶ್ ನಾಯ್ಕ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ವಿಜಯ ಕುಮಾರ್ ಶೆಟ್ಟಿ ವಂದಿಸಿದರು. ಶಿಕ್ಷಕ ಶಿರಿಯಾರ ಗಣೇಶ ನಾಯಕ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!