ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯಡಿ ಅರಿವು ಮೂಡಿಸುವ ಕಾರ್ಯಕ್ರಮವು ಡಿಸೆಂಬರ್ 8 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ಶಿವಳ್ಳಿ ಕೈಗಾರಿಕಾ ಪ್ರದೇಶದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಪಿ.ಎಮ್.ಇ.ಜಿ.ಪಿ ಯಡಿ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ನೀಡಲಾಗುವುದು. ಆಸಕ್ತ ನಿರುದ್ಯೋಗಿ ಯುವಕ ಹಾಗೂ ಯುವತಿಯರು ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಉಡುಪಿ ಮೊ. ಸಂಖ್ಯೆ: 9663136627 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.