ಉಡುಪಿ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು ಇವರ ಸಹಯೋಗದೊಂದಿಗೆ ಕಾಪು ಮಹಾದೇವಿ ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ಜೆ.ಇ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಕಾಪು ಶಾಸಕ ಲಾಲಾಜಿ ಮೆಂಡನ್ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಮಾತನಾಡಿ, ಮೆದುಳು ಜ್ವರವು ಅಧಿಕ ಸಂಖ್ಯೆಯಲ್ಲಿ ಮಕ್ಕಳಲ್ಲಿ ಕಂಡುಬರುವುದರಿಂದ 1 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಮೆದುಳು ಜ್ವರ ಬಾರದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಡಿಸೆಂಬರ್ 05 ರಿಂದ ಮೂರು ವಾರಗಳ ವರೆಗೆ ಜೆ.ಇ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಕಾಪು ಮಹಾದೇವಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಯು.ಜ್ಯೋತಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾಪು ಪುರಸಭೆ ಸದಸ್ಯರಾದ ಸರಿತಾ, ಅನಿಲ್ ಕುಮಾರ್, ನಾಗೇಶ್, ನಿತೀನ್, ರಾಧಿಕಾ, ಕಾಪು ಗ್ರಾಮೋದ್ಧಾರ ಸಂಘದ ಕಾರ್ಯದರ್ಶಿ ಮಾಧವ ಆರ್ ಪಾಲನ್, ಅಂಗನವಾಡಿ ಮೇಲ್ವಿಚಾರಕಿ ಪೂರ್ಣಿಮಾ, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು, ಮಹಾದೇವಿ ಪ್ರೌಢಶಾಲೆಯ ಉಪನ್ಯಾಸಕರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್ ಸ್ವಾಗತಿಸಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿ, ದೈಹಿಕ ಶಿಕ್ಷಕ ಮಧುಕರ್ ವಂದಿಸಿದರು.