ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಪ್ರೌಢಶಾಲೆಗಳಲ್ಲಿ ಮಹೋತ್ಸವ-2022ರ ಪ್ರಯುಕ್ತ ಪ್ರಶಸ್ತಿ ಪ್ರದಾನ ಸಮಾರಂಭ ವಿದ್ಯಾರ್ಥಿನಿಯರಾದ ಗಾರ್ಗಿದೇವಿ ಮತ್ತು ಶ್ರೇಯಾ ಆಚಾರ್ಯ ಅವರ ಭರತನಾಟ್ಯದ ಮೂಲಕ ಶುಭಾರಂಭಗೊಂಡಿತು.
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ. ಎಸ್. ಕಾಂತರಾಜು, ವಂಡ್ಸೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾಗಿರುವ ಪ್ರಕಾಶ ನಾಯ್ಕ್, ಬಸ್ರೂರು ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಜಯಲಕ್ಷ್ಮೀ ನಾಯಕ್ ಮತ್ತು ಪೋಷಕರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾತನಾಡಿ, ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಾಧನೆಗೈದ ಸಾಧಕರ ಜೀವನ ಪಥವನ್ನು ಅನುಸರಿಸಿ ಪ್ರತಿಯೊಬ್ಬರೂ ಕೂಡ ಸಾಧಕರಾಗಿ ಹೊರಹೊಮ್ಮಬೇಕು ಎಂದರು.
ಮಹೋತ್ಸವ 2022ರ ಭಾಗವಾಗಿ ಹಮ್ಮಿಕೊಂಡ ಕ್ರೀಡಾ ಮತ್ತು ಕಲಿಕೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಮತ್ತು ಶಾಲಾ ದತ್ತಿನಿಧಿಯ ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಉಪಪ್ರಾಂಶುಪಾಲೆ ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್, ಪೂರ್ವ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲತಾ ಜಿ. ಭಟ್, ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಶಿಕ್ಷಕ ಕೆ. ಪರಮೇಶ್ವರ ಉಡುಪ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.