Saturday, November 7, 2026
Saturday, November 7, 2026

ಪಡುಕರೆ ಕಾಲೇಜು- ಓದುಗರ ವೇದಿಕೆ ಉದ್ಘಾಟನೆ

ಪಡುಕರೆ ಕಾಲೇಜು- ಓದುಗರ ವೇದಿಕೆ ಉದ್ಘಾಟನೆ

Date:

ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಪಡುಕರೆಯಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ಓದುಗರ ವೇದಿಕೆಯನ್ನು ಉದ್ಘಾಟಿಸಲಾಯಿತು.

ಕನ್ನಡದ ಮೊದಲ ರಾಷ್ಟ್ರಕವಿ ಪಂಜೆ ಮಂಗೇಶರಾಯರ ಕವನವನ್ನು ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಶ್ರೀರಕ್ಷಾ ವಾಚಿಸುವ ಮೂಲಕ ಉದ್ಘಾಟನೆಗೊಂಡ ಕಾರ್ಯಕ್ರಮದಲ್ಲಿ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕಾರ್ಕಳ ಮಂಜುನಾಥ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕರಾದ ವೆಂಕಟೇಶ್, ಡಿಜಿಟಲ್ ಸಾಕ್ಷರತೆ ಮತ್ತು ಗ್ರಂಥಾಲಯದ ಬಳಕೆ ಕುರಿತಾಗಿ ವಿಶೇಷ ಉಪನ್ಯಾಸ ನೀಡುತ್ತಾ ವಿದ್ಯಾರ್ಥಿಗಳನ್ನು ಒಳಗೊಂಡು ಸಮಾಜದ ಎಲ್ಲಾ ವರ್ಗಗಳ ಜನರಿಗೆ ಇ-ಕಲಿಕೆ ಅನಿವಾರ್ಯವಾಗಿದ್ದು, ಇದರ ಸತ್ಯಾಸತ್ಯತೆಯನ್ನು ಮತ್ತು ಒಪ್ಪಿಕೊಳ್ಳಬಹುದಾದ ಮಾಹಿತಿಯನ್ನು ಸಂಗ್ರಹಿಸುವುದು ಅವಶ್ಯಕ.

ಯಾವ ಮಾಹಿತಿಯನ್ನು ತ್ವರಿತವಾಗಿ ಹೇಗೆ ಸಂಗ್ರಹಿಸಬಹುದೆಂಬುದರ ಕುರಿತಾಗಿ ವಿದ್ಯಾರ್ಥಿಗಳಿಗೆ ಅಗತ್ಯ ಮತ್ತು ಸರಳ ವಿಧಾನಗಳನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ ಗಾಂವ್ಕರ್, ಯುವಜನತೆಯಲ್ಲಿ ಓದುವ ಹವ್ಯಾಸ ಕ್ಷೀಣಿಸುತ್ತಿರುವ ಇಂದಿನ ದಿನಗಳಲ್ಲಿ ಡಿಜಿಟಲ್ ಗ್ರಂಥಾಲಯದ ಮಹತ್ವ ಹಾಗೂ ಓದುಗರ ವೇದಿಕೆಯು ವಿದ್ಯಾರ್ಥಿಗಳನ್ನು ಗ್ರಂಥಾಲಯದತ್ತ ಮುಖ ಮಾಡಲು ಪ್ರೇರೇಪಿಸುತ್ತದೆ. ಇದರ ಉಪಯೋಗ
ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆಯಿತ್ತರು.

ಕಾರ್ಯಕ್ರಮ ಆಯೋಜಿಸಿದ ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ, ಓದುಗರ ವೇದಿಕೆಯ ರಚನೆ ಮತ್ತು ಅತ್ಯುತ್ತಮ ಓದುಗರಿಗಾಗಿ ನೀಡುವ ಪುರಸ್ಕಾರಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಪಂಜೆ ಗೇಶರಾಯರ ಜೀವನ-ಸಾಧನೆಯನ್ನು ಪರಿಚಯಿಸಿದರು.

ರಾಜ್ಯಶಾಸ್ತ್ರ ಮುಖ್ಯಸ್ಥ ಪ್ರಶಾಂತ್ ನೀಲಾವರ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರೆ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಮಂಜುನಾಥ ಆಚಾರಿ ಕಾರ್ಯಕ್ರಮ ನಿರೂಪಿಸಿದರು.

ಬೋಧಕ ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಗುಡುಗು ಸಹಿತ ಮಳೆ

ಉಡುಪಿ, ನ.6: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ಗುಡುಗು ಸಹಿತ...

ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು, ನ.6: ಗೃಹಕಚೇರಿ ಕೃಷ್ಣಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ....

ಉಡುಪಿ ಶ್ರೀ ಕೃಷ್ಣ ಮಠ: ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

ಉಡುಪಿ, ನ.6: ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸವನ್ನು...
error: Content is protected !!