Tuesday, January 21, 2025
Tuesday, January 21, 2025

ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

Date:

ಉಡುಪಿ: ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಡಿಸೆಂಬರ್ 19 ರಂದು ಬೈಂದೂರು ಪ್ರವಾಸಿ ಮಂದಿರ, ಡಿ. 20 ರಂದು ಬ್ರಹ್ಮಾವರದ ಚಾಂತಾರು ಗ್ರಾಮ ಪಂಚಾಯತ್ ಸಭಾಂಗಣ, ಡಿ. 21 ರಂದು ಹೆಬ್ರಿ ತಾಲೂಕು ಕಚೇರಿ, ಡಿ. 22 ರಂದು ಕಾರ್ಕಳ ಪ್ರವಾಸಿ ಮಂದಿರ, ಡಿ. 26 ರಂದು ಕುಂದಾಪುರ ಪ್ರವಾಸಿ ಮಂದಿರ ಹಾಗೂ ಡಿ. 27 ರಂದು ಕಾಪು ಪುರಸಭೆ ಕಚೇರಿ ಆವರಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಲೋಕಾಯುಕ್ತ ಕಾಯ್ದೆಯಡಿ ದಾಖಲಾಗುವ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಇನ್ನುಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881 ಹಾಗೂ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2536661 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.

ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!