ಉಡುಪಿ: ಕರ್ನಾಟಕ ಸರಕಾರದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐ.ಟಿ ಮತ್ತು ಬಿ.ಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಡಾ. ಅಶ್ವಥ್ ನಾರಾಯಣ್ ಸಿ. ಎನ್ ಅವರು ಡಿಸೆಂಬರ್ 17 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಮಧ್ಯಾಹ್ನ 3 ಗಂಟೆಗೆ ಉಡುಪಿಯಲ್ಲಿ ಬಿಯಾಂಡ್ ಬೆಂಗಳೂರು ಯೋಜನೆಯಡಿ ನೈವಿಯಸ್ ಸಾಫ್ಟ್ವೇರ್ ಕಂಪೆನಿ ಉದ್ಘಾಟನಾ ಸಮಾರಂಭ, 3.30 ಕ್ಕೆ ಕಾಪುವಿನಲ್ಲಿ ಕಡಲ ಐಸಿರಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿರುವರು.