ಬ್ರಹ್ಮಾವರ: ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಅಂಗವಾಗಿ ಗುರುವಾರ ಎಸ್.ಎಂ.ಎಸ್. ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ರಾಜ್ಯಶಾಸ್ತ್ರ ಉಪನ್ಯಾಸಕರಾದ ಲಕ್ಷ್ಮಿನಾರಾಯಣ ನಾಯಕ್ ಪ್ರಾಸ್ತವಿಕ ಮಾತುಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಡಾ. ರವೀಂದ್ರನಾಥ್ ಶಾನಭಾಗ್ ಮಾನವ ಹಕ್ಕುಗಳ ಪ್ರಸ್ತುತತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಡಾ. ಮಂಜುನಾಥ ಉಡುಪ ಕೆ. ಅಧ್ಯಕ್ಷೀಯ ನುಡಿಗಳನ್ನಾಡಿದರು. ವೇದಿಕೆಯಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮೇರಿ ಮಮತಾ ಅಮ್ಮನ್ನ ಉಪಸ್ಥಿತರಿದ್ದರು.
ರಾಜೇಶ್ವರಿ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಅಪೂರ್ವ ಅತಿಥಿಗಳ ಕಿರು ಪರಿಚಯವನ್ನು ಮಾಡಿದರು ಮತ್ತು ಅಬ್ದುಲ್ ಮುಹಿಜ್ ವಂದಿಸಿದರು. ಬೋಧಕ ಹಾಗೂ ಬೋಧಕೇತರ ವೃಂದ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.