Saturday, November 7, 2026
Saturday, November 7, 2026

ಗ್ರಾ.ಪಂ.ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

ಗ್ರಾ.ಪಂ.ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

Date:

ಉಡುಪಿ: ಗ್ರಾಮ ಪಂಚಾಯತ್ ಉಪ ಚುನಾವಣೆ-2021 ಕ್ಕೆ ಸಂಬಂಧಿಸಿದಂತೆ, ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬ್ರಹ್ಮಾವರ ತಾಲೂಕಿನ 3 ಗ್ರಾಮ ಪಂಚಾಯತ್‌ನ ಸದಸ್ಯ ಸ್ಥಾನ, ಉಡುಪಿ, ಕಾಪು ಹಾಗೂ ಬೈಂದೂರು ತಾಲೂಕಿನ ತಲಾ 1 ಗ್ರಾಮ ಪಂಚಾಯತ್ ಸದಸ್ಯ ಸ್ಥಾನ ಸೇರಿದಂತೆ ಒಟ್ಟು 6 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿ ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

ನಾಮಪತ್ರಗಳನ್ನು ಸಲ್ಲಿಸಲು ಡಿಸೆಂಬರ್ 17 ಕೊನೆಯ ದಿನವಾಗಿದ್ದು, ಡಿ. 18 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಡಿ. 20 ಕೊನೆಯ ದಿನವಾಗಿದ್ದು, ಡಿ. 27 ರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಡಿ. 30 ರಂದು ಬೆಳಗ್ಗೆ 8 ರಿಂದ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯವು ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಗುಡುಗು ಸಹಿತ ಮಳೆ

ಉಡುಪಿ, ನ.6: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ಗುಡುಗು ಸಹಿತ...

ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು, ನ.6: ಗೃಹಕಚೇರಿ ಕೃಷ್ಣಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ....

ಉಡುಪಿ ಶ್ರೀ ಕೃಷ್ಣ ಮಠ: ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

ಉಡುಪಿ, ನ.6: ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸವನ್ನು...
error: Content is protected !!