Wednesday, September 25, 2024
Wednesday, September 25, 2024

ಸಾಹಿತ್ಯದಿಂದ ಸಾಮಾಜಿಕ ಬದಲಾವಣೆ ಸಾಧ್ಯ: ಗೋವಿಂದ ಬಾಬು ಪೂಜಾರಿ

ಸಾಹಿತ್ಯದಿಂದ ಸಾಮಾಜಿಕ ಬದಲಾವಣೆ ಸಾಧ್ಯ: ಗೋವಿಂದ ಬಾಬು ಪೂಜಾರಿ

Date:

ಉಡುಪಿ: ಸಾಹಿತ್ಯ ಸೇರಿದಂತೆ ಎಲ್ಲ ರಂಗಗಳಲ್ಲಿನ ಪ್ರತಿಯೊಬ್ಬ ವ್ಯಕ್ತಿಯ ಯಶಸ್ಸಿನ ಹಿಂದೆಯೂ ಅಪಾರ ಪರಿಶ್ರಮ ಅಡಗಿರುತ್ತದೆ. ಅದನ್ನು ಮೆಚ್ಚಿ ಅಭಿನಂದಿಸುವ ಪರಸ್ಪರ ಸಹಕರಿಸುವ ಮನಸ್ಸುಗಳು ಸಮಾಜದಲ್ಲಿ ಹೆಚ್ಚಬೇಕು ಎಂದು ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರಾದ ಗೋವಿಂದ ಬಾಬು ಪೂಜಾರಿ ಅಭಿಪ್ರಾಯಪಟ್ಟರು.

ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಗಂಗೊಳ್ಳಿಯ ಸಂಜೀವ ಪಾರ್ವತಿ ಪ್ರಕಾಶನದ ಆಶ್ರಯದಲ್ಲಿ ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಸಹಕಾರದೊಂದಿಗೆ ನಡೆದ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಾಯಿ ನಾನು’ ಕಥಾ ಸಂಕಲನ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಾಹಿತ್ಯದಿಂದ ಸಾಮಾಜಿಕ ಬದಲಾವಣೆ ಖಂಡಿತ ಸಾಧ್ಯವಾಗುತ್ತದೆ. ನರೇಂದ್ರರ ಬರಹಗಳಲ್ಲಿ ಅಂತಹ ಚಿಂತನೆಗಳು ಹೇರಳವಾಗಿ ಸಿಗುತ್ತವೆ ಎಂದು ಅವರು ಹೇಳಿದರು.

ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಗೋವಿಂದ ಬಾಬು ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಾಯಿ ನಾನು ಪುಸ್ತಕದ ಮುಖಪುಟ ಚಿತ್ರ ಕಲಾವಿದೆ ಕೀರ್ತಿ ಭಟ್ ಅವರನ್ನು ಕೂಡ ಗೌರವಿಸಲಾಯಿತು.

ಜಿ.ಎಸ್. ವಿ. ಎಸ್ ಅಸೋಸಿಯೇಷನ್ ಸದಸ್ಯರಾದ ಕೆ ರಾಮನಾಥ ನಾಯಕ್ ಶುಭ ಹಾರೈಸಿದರು. ಹಿರಿಯ ಸಹಕಾರಿ ಲೇಖಕ ಕೆ ಪುಂಡಲೀಕ ನಾಯಕ್ ಪುಸ್ತಕವನ್ನು ಪರಿಚಯಿಸಿದರು. ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಗೋಪಾಲ ಪೂಜಾರಿ, ರೋಟರಿ ಕ್ಲಬ್ ಅಧ್ಯಕ್ಷೆ ಸುಗುಣ ಆರ್ ಕೆ ಉಪಸ್ಥಿತರಿದ್ದರು.

ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಸನ್ನಿಧಿ ಹೊಳ್ಳ ಪ್ರಾರ್ಥಿಸಿದರು. ದೀಕ್ಷಾ ಮತ್ತು ರಕ್ಷಿತಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಅಮೀಕ್ಷಾ ಡಿ ನಾಯ್ಕ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾನೂನು ಸಚಿವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ

ಉಡುಪಿ, ಸೆ.24: ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ...

ಕಾಪು: ನವದುರ್ಗಾ ಲೇಖನ ಯಜ್ಞದ ಸೇವಾ ಕಚೇರಿ ಉದ್ಘಾಟನೆ

ಕಾಪು, ಸೆ.24: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ...
error: Content is protected !!