Sunday, September 22, 2024
Sunday, September 22, 2024

ಜ್ಞಾನಸುಧಾ: ವಾರ್ಷಿಕ ಕ್ರೀಡಾಕೂಟ

ಜ್ಞಾನಸುಧಾ: ವಾರ್ಷಿಕ ಕ್ರೀಡಾಕೂಟ

Date:

ಗಣಿತನಗರ: ವಿದ್ಯಾರ್ಥಿಗಳಲ್ಲಿರುವ ಒತ್ತಡ, ದುಗುಡ, ದುಮ್ಮಾನ ದೂರ ಮಾಡಿ, ಉತ್ಸಾಹದಿಂದ ಬೆಳೆಯಲು ಕ್ರೀಡೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕೃತಿಕವಾಗಿ ಗುರುತಿಸಿಕೊಂಡರೆ ಅವರಿಗೆ ಸಮಾಜದ ಮುಖ್ಯ ವೇದಿಕೆ ಸಿಗಲು ಸಾಧ್ಯವಿದೆ ಎಂದು ಉಡುಪಿ ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ವಿಭಾಗದ ಉಪನಿರ್ದೇಶಕರಾದ ಡಾ. ರೋಷನ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ 2022-23ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಉಡುಪಿ ಜಿಲ್ಲಾ ಪ.ಪೂ. ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ ಮಾತನಾಡಿ, ಜ್ಞಾನಸುಧಾ ಸಂಸ್ಥೆಯು ಜಿಲ್ಲೆಯಲ್ಲೇ ಗುಣಮಟ್ಟದ ಶಿಕ್ಷಣಕ್ಕೆ ಮಾದರಿಯಾಗಿದೆ.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣೀಕರ್ತರಾದ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿಯವರ ಕಾರ್ಯ ಶ್ಲಾಘನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ವಹಿಸಿದ್ದರು.

ಕಾಲೇಜಿನ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಹೆಗ್ಡೆ ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಸಂಗೀತಾ ನಿರೂಪಿಸಿದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪ್ರಜ್ವಲ್ ಕುಲಾಲ್ ವೀಕ್ಷಕ ವಿವರಣಾಕಾರರಾಗಿ ಕಾರ್ಯನಿರ್ವಹಿಸಿದರು.

ಸಮಾರೋಪ ಸಮಾರಂಭ: ಸಂಜೆ ನಡೆದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಬೈಲೂರು ಪ.ಪೂ. ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ಮಂಜುನಾಥ್ ಶೆಟ್ಟಿ ಮಾತನಾಡಿ ಸೋಲು-ಗೆಲುವುಗಳನ್ನು ಮೀರಿ ಕ್ರೀಡೆಯಲ್ಲಿ ಭಾಗವಹಿಸಿ ದೊರಕುವ ಅನುಭವವು ಅಮೂಲ್ಯವಾದುದು ಎಂದರು.

ವಿದ್ಯಾರ್ಥಿಗಳಾದ ಕಾರ್ತಿಕ್ ವೈ, ಸಂಜನಾ ಬೆಸ್ಕೂರು, ಸನ್ನಿಧಿ ವೈಯಕ್ತಿಕ ಒವರ್ ಆಲ್ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡರು. ಡಾ. ಪ್ರಜ್ವಲ್ ಕುಲಾಲ್ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ನಿರ್ದೇಶಕಿ
ಸೌಜನ್ಯ ಹೆಗ್ಡೆ ವಂದಿಸಿದರು.

ಕಾರ್ಯಕ್ರಮದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ, ಟ್ರಸ್ಟಿ ಅನಿಲ್ ಕುಮಾರ್ ಜೈನ್, ಪ್ರಾಂಶುಪಾಲ ದಿನೇಶ್.ಎಂ.ಕೊಡವೂರ್, ಉಪಪ್ರಾಂಶುಪಾಲರಾದ ಸಾಹಿತ್ಯ, ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ ಸಹಿತ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!