Thursday, October 1, 2026
Thursday, October 1, 2026

ಹೊಸತನದ ಕಾರ್ಯಕ್ರಮಗಳ ಮೂಲಕ ಸಂಘ ಸಂಸ್ಥೆಗಳಲ್ಲಿ ಕೌಟುಂಬಿಕ ಮನೋಭಾವನೆ ವೃದ್ಧಿ: ದಿನೇಶ್ ಪೂಜಾರಿ ಬೀರೊಟ್ಟು

ಹೊಸತನದ ಕಾರ್ಯಕ್ರಮಗಳ ಮೂಲಕ ಸಂಘ ಸಂಸ್ಥೆಗಳಲ್ಲಿ ಕೌಟುಂಬಿಕ ಮನೋಭಾವನೆ ವೃದ್ಧಿ: ದಿನೇಶ್ ಪೂಜಾರಿ ಬೀರೊಟ್ಟು

Date:

ಬೆಳ್ಮಣ್: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ 23ನೇ ವರ್ಷದ ತ್ರೈಮಾಸಿಕ ಸಭೆಯು ಆದಿತ್ಯವಾರ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಂಗಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಸಭೆಯಲ್ಲಿ ಸಂಘದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ ಮಾತನಾಡುತ್ತಾ, ಹೊಸತನದ ಕಾರ್ಯಕ್ರಮಗಳ ಮೂಲಕ ಸಂಘ ಸಂಸ್ಥೆಗಳಲ್ಲಿ ಯುವಜನತೆ ಹೆಚ್ಚಾಗಿ ತೊಡಗಿಸಿಕೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ಕೌಟುಂಬಿಕ ಮನೋಭಾವನೆ ವೃದ್ಧಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಾಧ್ಯಕ್ಷ ಉದಯ ಅಂಚನ್, ಕಾರ್ಯದರ್ಶಿ ಲಲಿತಾ ಆಚಾರ್ಯ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ,
ಪೂವಾಧ್ಯಕ್ಷರಾದ ಸುರೇಶ್ ಕಾಸ್ರಬೈಲು, ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷೆ ಲೀಲಾ ಪೂಜಾರಿ, ಜೊತೆ ಕಾರ್ಯದರ್ಶಿ ಸುದರ್ಶನ್ ಕುಂದರ್, ಕೋಶಾಧಿಕಾರಿ ಅಶ್ವಿನಿ ಪ್ರಭಾಕರ್, ಅಬ್ಬನಡ್ಕ ಶ್ರೀ ವನದುರ್ಗಾ ಸ್ವ- ಸಹಾಯ ಸಂಘದ ಅಧ್ಯಕ್ಷೆ ವೀಣಾ ಪೂಜಾರಿ, ಕಾರ್ಯದರ್ಶಿ ಪುಷ್ಪ ಕುಲಾಲ್, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಕೀರ್ತನ್ ಪೂಜಾರಿ ಸದಸ್ಯರಾದ ಹರೀಶ್ ಪೂಜಾರಿ, ಆರತಿ ಕುಮಾರಿ, ಹರಿಣಾಕ್ಷಿ, ಅಶ್ವಿನಿ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!