ಉಡುಪಿ: ಶಿಕ್ಷಣ ಎಂದರೆ ಕೇವಲ ಪಾಠ ಪ್ರವಚನಗಳಲ್ಲ. ವಿದ್ಯಾರ್ಥಿಗಳ ದೇಹ, ಮನಸುಗಳನ್ನು ಒಂದುಗೂಡಿಸುವ ಜ್ಞಾನದ ಜೊತೆಗೆ ಆಟವು ಬಹು ಮುಖ್ಯ. ಆಗ ಮಾತ್ರ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಾಗಲು ಸಾದ್ಯ ಎಂದು ಉದ್ಯಮಿ ಸಂತೋಷ್ ಡಿಸಿಲ್ವಾ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪ.ಪೂ.ಕಾಲೇಜಿನ ಗಣಿತನಗರ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಪರಿಶ್ರಮ, ಮುನ್ನುಗ್ಗುವ ಛಲವಿದ್ದರೆ ಕ್ರೀಡೆಯಲ್ಲಿ ಉತ್ತಮ ಭವಿಷ್ಯವಿದೆ. ಜೀವನದಲ್ಲಿ ಒತ್ತಡ ರಹಿತವಾಗಿರಲು ಕ್ರೀಡೆಗಳು ಸಹಕಾರಿಯಾಗಿದೆ ಎಂದು ಮುಖ್ಯ ಅತಿಥಿಯಾಗಿದ್ದ ರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು
ಸುದೀಪ್ ಶೆಟ್ಟಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಇದರ ಟ್ರಸ್ಟಿ ಅನಿಲ್ ಕುಮಾರ್ ಜೈನ್ ವಹಿಸಿದ್ದರು. ಉಡುಪಿ ಜ್ಞಾನಸುಧಾ ಪ.ಪೂ.ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕ ಅರುಣ್ ಕುಮಾರ್ ವಂದಿಸಿದರು. ಆಂಗ್ಲಭಾಷಾ ಉಪನ್ಯಾಸಕಿ ಸಂಗೀತ ಕುಲಾಲ್ ನಿರೂಸಿದರು.
ಸಮಾರೋಪ ಸಮಾರಂಭ: ಸಂಜೆ ನಡೆದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಸಿ.ಎ. ಪ್ರಭಾತ್ ಕುಮಾರ್ ಕಾರ್ಕಳ, ಉದ್ಯಮಿ ತ್ರಿವಿಕ್ರಮ ಕಿಣಿ ಭಾಗವಹಿಸಿದ್ದರು. ವೈಯಕ್ತಿಕ ಓವರ್ ಆಲ್ ಚಾಂಪಿಯನ್ಶಿಪ್ ಪ್ರಶಸ್ತಿಯನ್ನು ವಿದ್ಯಾರ್ಥಿಗಳಾದ ಅಶ್ವಿನ್ ಹಾಗೂ ನಿಧಿಶ್ರೀ ಮುಡಿಗೇರಿಸಿಕೊಂಡರು.
ಕಾರ್ಯಕ್ರಮದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಟ್ರಸ್ಟಿ ಅನಿಲ್ ಕುಮಾರ್ ಜೈನ್, ಪ್ರಾಂಶುಪಾಲ ದಿನೇಶ್ ಎಂ.ಕೊಡವೂರ್, ಉಪಪ್ರಾಂಶುಪಾಲ ಸಾಹಿತ್ಯ, ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ ಸಹಿತ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಆಂಗ್ಲಭಾಷಾ ಉಪನ್ಯಾಸಕಿ ಸಂಗೀತ ಕುಲಾಲ್ ನಿರೂಪಿಸಿ, ಉಪಪ್ರಾಂಶುಪಾಲ ಸಂತೋಷ್ ವಂದಿಸಿದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪ್ರಜ್ವಲ್ ಕುಲಾಲ್ ವೀಕ್ಷಕ ವಿವರಣಾಕಾರರಾಗಿ ಕಾರ್ಯನಿರ್ವಹಿಸಿದರು.