Home ಸುದ್ಧಿಗಳು ಪ್ರಾದೇಶಿಕ ಉಡುಪಿ ಜಿಲ್ಲೆಯ ವಿವಿಧೆಡೆ ತಂಬಾಕು ನಿಯಂತ್ರಣ ತನಿಖಾ ದಳದ ದಾಳಿ

ಉಡುಪಿ ಜಿಲ್ಲೆಯ ವಿವಿಧೆಡೆ ತಂಬಾಕು ನಿಯಂತ್ರಣ ತನಿಖಾ ದಳದ ದಾಳಿ

243
0

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಸೋಮವಾರ ಪುತ್ತಿಗೆ ಹಾಗೂ ಪೆರ್ಡೂರು ವ್ಯಾಪ್ತಿಯ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಸೆಕ್ಷನ್ 4, 6(ಎ) ಮತ್ತು 6 (ಬಿ) ಅಡಿಯಲ್ಲಿ 29 ಪ್ರಕರಣ ದಾಖಲಿಸಿ, 43,000 ರೂ. ದಂಡ ವಸೂಲಿ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ತಾಲೂಕು ಶಿಕ್ಷಣ ಇಲಾಖೆಯ ಗೋಪಾಲ ಶೆಟ್ಟಿ, ಕಾರ್ಮಿಕ ನಿರೀಕ್ಷಕ ವಿಜಯೇಂದ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯ ಶೈಲಾ ಶ್ಯಾಮನೂರು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.