Tuesday, September 24, 2024
Tuesday, September 24, 2024

ಜನಸಾಮಾನ್ಯರಿಗೆ ಉತ್ತಮ ಆಡಳಿತ ಒದಗಿಸುವುದು ಸರ್ಕಾರಿ ನೌಕರರ ಕರ್ತವ್ಯ: ನಿವೃತ್ತ ಜಿಲ್ಲಾಧಿಕಾರಿ ಕಲ್ಪನಾ

ಜನಸಾಮಾನ್ಯರಿಗೆ ಉತ್ತಮ ಆಡಳಿತ ಒದಗಿಸುವುದು ಸರ್ಕಾರಿ ನೌಕರರ ಕರ್ತವ್ಯ: ನಿವೃತ್ತ ಜಿಲ್ಲಾಧಿಕಾರಿ ಕಲ್ಪನಾ

Date:

ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕರಿಗೆ ಸೇವೆಗಳನ್ನು ಉತ್ತಮ ರೀತಿಯಲ್ಲಿ ಒದಗಿಸುವುದು ಸರ್ಕಾರಿ ನೌಕರರ ಆದ್ಯ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಿವೃತ್ತ ಜಿಲ್ಲೆಯ ಪ್ರಥಮ ಜಿಲ್ಲಾಧಿಕಾರಿ ಕಲ್ಪನಾ ಹೇಳಿದರು. ಅವರು ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಉತ್ತಮ ಆಡಳಿತ ಸಪ್ತಾಹದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ವರ್ಚುವಲ್ ಮೂಲಕ ಮಾತನಾಡಿದರು.

ಜನರಿಂದ ಜನರಿಗೋಸ್ಕರ ಇರುವ ಸರ್ಕಾರ ಜನಸಾಮಾನ್ಯರನ್ನು ಕೇಂದ್ರವನ್ನಾಗಿಟ್ಟುಕೊಂಡು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತದೆ. ಇವುಗಳನ್ನು ಅನುಷ್ಠಾನಗೊಳಿಸುವ ಕೆಲಸ ಕಾರ್ಯಾಂಗದ್ದಾಗಿದ್ದು, ಸರ್ಕಾರಿ ನೌಕರರ ಮೇಲೆ ಇರುತ್ತದೆ. ಇದನ್ನು ಅರಿತು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಬಹುಪಾಲು ಜನರು ಸರ್ಕಾರದಿಂದ ಹೆಚ್ಚೇನೂ ನಿರೀಕ್ಷಿಸದೇ ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಂಡು ಹೋಗುತ್ತಿರುತ್ತಾರೆ. ಅವರುಗಳು ಸರ್ಕಾರದಿಂದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಮಾತ್ರ ಅಪೇಕ್ಷಿಸುತ್ತಾರೆ. ಅವರ ನಿರೀಕ್ಷೆಗೆ ತಕ್ಕಂತೆ ನಾವು ಸ್ಪಂದಿಸಬೇಕು ಎಂದರು.

ಆಧುನಿಕತೆಯ ಈ ಯುಗದಲ್ಲಿ ತಾಂತ್ರಿಕತೆಯು ತುಂಬಾ ಮುಂದುವರೆದಿದ್ದು, ಇದರ ಸದ್ಬಳಕೆಯಿಂದ ಆಡಳಿತ ಕಾರ್ಯಗಳನ್ನು ವಿಳಂಬವಿಲ್ಲದೇ ಪಾರದರ್ಶಕತೆಯೊಂದಿಗೆ ಅನುಷ್ಠಾನಗೊಳಿಸಬೇಕು ಎಂದ ಅವರು, ನೌಕರರು ತಮ್ಮ ಸೇವೆಯ ಅವಧಿಯಲ್ಲಿ ಜನರಿಗೆ ಸೇವಾ ಮನೋಭಾವದಿಂದ ವಿಶೇಷ ಒತ್ತನ್ನು ನೀಡಿ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದರು.

ಉತ್ತಮ ಆಡಳಿತ ಸೇವೆಯನ್ನು ಒದಗಿಸಿದಾಗ ಮಾತ್ರ ಜನರ ಸಂಕಷ್ಟಗಳು ದೂರವಾಗುತ್ತವೆ. ಈ ದಿಸೆಯಲ್ಲಿ ನಾವೆಲ್ಲರೂ ನಮ್ಮ ದೈನಂದಿನ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದರು.

ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್ ಮಾತನಾಡಿ, ಅಡಳಿತ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುವಾಗ ಸ್ಥಳೀಯ ಜನರ ಅಭಿಲಾಷೆಗೆ ತಕ್ಕಂತೆ ಹೊಸ ಆಲೋಚನೆಗಳೊಂದಿಗೆ ಜನರ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸಿದಾಗ ಅಸಾಧ್ಯವಾದದ್ದನ್ನು ಸಹ ಅನುಷ್ಠಾನಗೊಳಿಸಲು ಸಾಧ್ಯ ಎಂಬ ಹಲವು ನಿದರ್ಶನಗಳನ್ನು ಹಂಚಿಕೊಳ್ಳುವುದರೊಂದಿಗೆ ನಾವೂ ಸಹ ಆ ರೀತಿಯಲ್ಲಿಯೇ ಕಾರ್ಯನಿರ್ವಹಿಸಬೇಕು ಎಂದರು.

ಉತ್ತಮ ಆಡಳಿತದಿಂದಾಗಿ ಜಿಲ್ಲೆಯಲ್ಲಿ ನಡೆದಿರುವ ಎಂ.ಆರ್.ಎಫ್ ಘಟಕದ ಕಾರ್ಯವಿಧಾನ, ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಿರುವ ಸೌಲಭ್ಯಗಳು ಹಾಗೂ ಕಸ ನಿರ್ವಹಣೆಯಲ್ಲಿ ಬ್ಲಾಕ್‌ಸ್ಪಾಟ್‌ಗಳ ನಿರ್ಮೂಲನೆ ಬಗ್ಗೆ ಸಾಕ್ಷ್ಯಚಿತ್ರದೊಂದಿಗೆ ವಿವರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಯೋಜನಾ ನಿರ್ದೇಶಕ ಬಾಬು ಹಾಗೂ ಜಿಲ್ಲೆಯ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಸಮಯದಲ್ಲಿ ಕಾವೇರಿ ಐದನೇ ಹಂತಕ್ಕೆ ಚಾಲನೆ: ಡಿಕೆಶಿ

ಬೆಂಗಳೂರು, ಸೆ.24: ಬೆಂಗಳೂರು ನಗರದ ಮೂಲೆ ಮೂಲೆಗೂ ಕಾವೇರಿ ನೀರನ್ನು ತಲುಪಿಸುವ...

ನೂತನ ಆ್ಯಂಬುಲೆನ್ಸ್‌ಗಳಿಗೆ ಚಾಲನೆ

ಬೆಂಗಳೂರು, ಸೆ.24: ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಅವರ್‌ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ...

ಸೆ.26: ಕೆಎಚ್‌ಐಆರ್‌ ಸಿಟಿ ಮೊದಲ ಹಂತಕ್ಕೆ ಚಾಲನೆ

ಬೆಂಗಳೂರು, ಸೆ.24: ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರಗಳು ಒಂದೆಡೇ...

ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಠಾಣೆಗಳಲ್ಲಿ ಪ್ರತ್ಯೇಕ ತಂಡ

ಬೆಂಗಳೂರು, ಸೆ.24: ಫೇಕ್‌ ನ್ಯೂಸ್‌ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ...
error: Content is protected !!