ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಿಎಸ್‌ಆರ್ ಯೋಜನೆಯಡಿಯಲ್ಲಿ 29 ಅರ್ಹ ವಸತಿರಹಿತ ಕುಟುಂಬಗಳಿಗೆ ಒಟ್ಟು 26ಲಕ್ಷ ರೂ. ಸಹಾಯಧನದ ಚೆಕ್ ವಿತರಣಾ ಸಮಾ ರಂಭವು ಶುಕ್ರವಾರ ಮಲಬಾರ್ ಗೋಲ್ಡ್ ಉಡುಪಿ ಮಳಿಗೆಯಲ್ಲಿ ನಡೆಯಿತು.
ಫಲಾನುಭವಿಗಳಿಗೆ ಚೆಕ್ ವಿತರಿಸಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಮಾತನಾಡಿ, ಮಲಬಾರ್ ಗೋಲ್ಡ್ ಆರ್ಥಿಕ ವ್ಯವಹಾರದ ಜೊತೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವುದು ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಸಾಮಾಜಿಕವಾಗಿ ನೆರವು ನೀಡುವ ಮೂಲಕ ಈ ಸಂಸ್ಥೆ ಸಮಾಜಮುಖಿ ಕೆಲಸ ಮಾಡುತ್ತಿದೆ. ತಮ್ಮ ಲಾಭದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಕ್ಕೆ ವಿನಿಯೋಗಿಸುತ್ತಿ ರುವುದು ಶ್ಲಾಘನೀಯ ಎಂದು ತಿಳಿಸಿದರು.
ಪರ್ಕಳ ದೇವಿನಗರದ ಬಳಕೆದಾರರ ವೇದಿಕೆಯ ಗೌರವಾಧ್ಯಕ್ಷ ಹಾಜಿ ಕೆ. ಅಬೂಬಕರ್ ಪರ್ಕಳ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಸಾಮಾಜಿ ಕಾರ್ಯಕರ್ತೆ ವಿನುತಾ ಕಿರಣ್, ಸಮಾಜ ಸೇವಕ ವಿಲ್ಫ್ರೇಡ್ ಡಿಸೋಜ, ಕಿದಿಯೂರು ಉದಯ ಕುಮಾರ್ ಫ್ಯಾಮಿಲಿ ಟ್ರಸ್ಟ್‌ನ ಕೆ. ಉದಯ ಕುಮಾರ್ ಶೆಟ್ಟಿ, ಸಮಾಜ ಸೇವಕ ಲೀಲಾಧರ ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಉಪಸ್ಥಿತರಿದ್ದರು.
ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಸುರೇಶ್ ಮರಕಲ, ಶಿಕ್ಷಕರಾದ ಮನು ಹಂದಾಡಿ, ಅರ್ಪಿತಾ ಶೆಟ್ಟಿ ಕಟಪಾಡಿ, ವಂದನಾ ರೈ ಕಾರ್ಕಳ, ನಿರ್ಮಲ್ ಕುಮಾರ್ ಹೆಗ್ಡೆ ಕಾಪು, ಚಿತ್ರ ಕಲಾವಿದ ಅಕ್ಷಯ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು.
ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಪಿಜಿಆರ್‌ಎಂ ರಾಘವೇಂದ್ರ ನಾಯಕ್, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ, ಶಾಖಾ ವ್ಯವಸ್ಥಾಪಕ ಪುರಂದರ ತಿಂಗಳಾಯ ಉಪಸ್ಥಿತರಿದ್ದರು.
ಆರ್.ಜೆ.ಎರಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.