Wednesday, January 22, 2025
Wednesday, January 22, 2025

ಮರೆಯಲ್ಲಿರುವ ಸಾಧಕರು ಮುಖ್ಯವಾಹಿನಿಗೆ ಬರುವಂತಾಗಲಿ: ಕೊಯ್ಕೂರು ಸೀತಾರಾಮ ಶೆಟ್ಟಿ

ಮರೆಯಲ್ಲಿರುವ ಸಾಧಕರು ಮುಖ್ಯವಾಹಿನಿಗೆ ಬರುವಂತಾಗಲಿ: ಕೊಯ್ಕೂರು ಸೀತಾರಾಮ ಶೆಟ್ಟಿ

Date:

ಕೋಟ: ನಮ್ಮ ನಡುವೆ ಹಲವಾರು ಎಲೆಮರೆ ಕಾಯಿಯಂತೆ ಸಾಧಕರಿದ್ದು ಅವರ ಸಾಧನೆಯ ಹೆಜ್ಜೆ ಅನಾವರಣವಾಗುವ ಕೆಲಸವಾಗಿ ಅವರು ಮುಖ್ಯವಾಹಿನಿಗೆ ಬರುವಂತಾಗಬೇಕು. ದತ್ತಿ ಪುರಸ್ಕಾರದ ಮೂಲಕ ಸಾಧಕರನ್ನು ಸಮಾಜ ಗುರುತಿಸುವಂತೆ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಯಕ್ಷ ನಿರ್ದೇಶಕ, ಶಿಕ್ಷಕ ಕೊಯ್ಕೂರು ಸೀತರಾಮ ಶೆಟ್ಟಿ ಹೇಳಿದರು.

ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ, ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ಕೋಟ, ಡಾ. ಶಿವರಾಮ ಕಾರಂತ ಅನೌಪಚಾರಿಕ ಶಿಕ್ಷಣ ಕೇಂದ್ರ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ನಡೆದ ಕಾರಂತರ ಇಪ್ಪತ್ತೈದನೇ ಪುಣ್ಯಸ್ಮರಣೆ ಅಂಗವಾಗಿ ಮಕ್ಕಳ ಸಾಂಸ್ಕೃತಿಕ -ಸಾಹಿತ್ಯಿಕ ರಸಗವಳ ಅನೂಹ್ಯ- 2022(ನಾವೀನ್ಯದ ಗೌಜಿ) ಎರಡನೇ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ದಿ.ಉಪೇಂದ್ರ ಐತಾಳ್ ಸ್ಮಾರಕ ಕೃಷಿ ಪರಿಶ್ರಮ ಪುರಸ್ಕಾರಕ್ಕೆ ಸದಾಶಿವ ಐತಾಳ್, ದಿ.ರಾಘವೇಂದ್ರ ಉರಾಳ ಸ್ಮಾರಕ ಸಂಶೋಧಕ ಸಾಧಕ ಪುರಸ್ಕಾರಕ್ಕೆ ಪ್ರದೀಪ್ ಬಸ್ರೂರು, ದಿ.ಡಾ. ಆನಂದ ಶೆಟ್ಟಿ ಸ್ಮಾರಕ ಆದರ್ಶ ಶಿಕ್ಷಕ ಪುರಸ್ಕಾರಕ್ಕೆ ಭಾಸ್ಕರ ಪೂಜಾರಿ, ದಿ ಮನೋಹರ್ ತೋಳಾರ್ ಸ್ಮಾರಕ ಕ್ರೀಡಾ ಪುರಸ್ಕಾರಕ್ಕೆ ಆಯ್ಕೆಯಾದ ಶಿವನಾರಾಯಣ ಐತಾಳ್ ಅವರಿಗೆ ದತ್ತಿ ಪುರಸ್ಕಾರ ಪ್ರದಾನ ಮಾಡಲಾಯಿತು.

ವೇದಿಕೆಯಲ್ಲಿ ಕರ್ನಾಟಕ ಬ್ಯಾಂಕ್ ಕೋಟ ಶಾಖೆಯ ಪ್ರಬಂಧಕ ಸಂತೋಷ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಪೃಗತಿಪರ ಕೃಷಿಕ ರವೀಂದ್ರ ಐತಾಳ್, ಕೋಟತಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಮ್ ಶೆಟ್ಟಿ, ಕೋಟ ಸ.ಹಿ.ಪ್ರಾ.ಶಾಲೆ ಮುಖ್ಯೋಪಾಧ್ಯಾಯರಾದ ಪುಷ್ಪ ಉಪಸ್ಥಿತರಿದ್ದರು.

ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಸ್ತಾವಿಕವಾಗಿ ಮಾತನಾಡಿದರು. ಸಾಹಿತಿ ಮಂಜುಳ ಜಿ ತೆಕ್ಕಟ್ಟೆ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!