Tuesday, February 25, 2025
Tuesday, February 25, 2025

18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಮುಂಜಾಗ್ರತಾ ಡೋಸ್ ಲಸಿಕೆ ಪಡೆಯುವುದು ಅಗತ್ಯ

18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಮುಂಜಾಗ್ರತಾ ಡೋಸ್ ಲಸಿಕೆ ಪಡೆಯುವುದು ಅಗತ್ಯ

Date:

ಉಡುಪಿ: ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ ಹಾಗೂ ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್ – 19 4ನೇ ಅಲೆ ಪ್ರಕರಣಗಳು ಹೆಚ್ಚುತ್ತಿದ್ದು, ಇದರಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಮುಂಜಾಗ್ರತಾ ಡೋಸ್ ಲಸಿಕೆ ಪಡೆಯುವುದು ಅಗತ್ಯವಾಗಿದೆ.

ಜಿಲ್ಲೆಯಲ್ಲಿರುವ 18 ವರ್ಷ ಮೇಲ್ಪಟ್ಟವರಲ್ಲಿ 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ದಾಟಿದವರು ಸಮೀಪದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯ ಬಗ್ಗೆ ಖಚಿತಪಡಿಸಿಕೊಂಡು ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ ಲಸಿಕೆ ಪಡೆಯಬಹುದಾಗಿದೆ.

ಜಿಲ್ಲೆಯಲ್ಲಿರುವ 15 ರಿಂದ 17 ವರ್ಷ ಪ್ರಾಯದ ಶಾಲಾ ಮಕ್ಕಳಲ್ಲಿ ಕೋವ್ಯಾಕ್ಸಿನ್ ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಇದ್ದಲ್ಲಿ ಶಾಲೆಗೆ ಸಂಬಂಧಪಟ್ಟ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯ ಬಗ್ಗೆ ಖಚಿತಪಡಿಸಿಕೊಂಡು ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ ಲಸಿಕೆ ಪಡೆಯಬೇಕು.

ಪ್ರಸ್ತುತ ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಮಾತ್ರ ಲಭ್ಯವಿದ್ದು, ಕೋವಿಶೀಲ್ಡ್ ಲಸಿಕೆಯು ಲಭ್ಯವಿರುವುದಿಲ್ಲ. ಕೋವಿಶೀಲ್ಡ್ ಲಸಿಕೆಯು ಜಿಲ್ಲೆಗೆ ಸರಬರಾಜಾದ ತಕ್ಷಣ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!