Home ಸುದ್ಧಿಗಳು ಪ್ರಾದೇಶಿಕ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

436
0

ಉಡುಪಿ: ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಸಾಹಿತ್ಯ ತಂಗುದಾಣ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯದ ಪದವಿಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಮಹಿಳಾ ದೌರ್ಜನ್ಯವನ್ನು ತಡೆಗಟ್ಟುವಲ್ಲಿ ನಮ್ಮ ಅರಿವು’ ಎನ್ನುವ ವಿಷಯದ ಕುರಿತಂತೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪವಿತ್ರ ಎನ್ ಮೊಗೇರಿ ಮತ್ತು ನಿಶಾ ಬಿ ಪೂಜಾರಿ ಇವರಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಗೋಪಾಲ ಪೂಜಾರಿ, ಸಾಹಿತ್ಯ ತಂಗುದಾಣದ ನಿರ್ವಾಹಕ ನರೇಂದ್ರ ಎಸ್ ಗಂಗೊಳ್ಳಿ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಸ್ವಾತಿ ಆಚಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.