ಮಣಿಪಾಲ: ಉಡುಪಿ ನಗರದ ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿಯ ರಿಕ್ಷಾ ನಿಲ್ದಾಣದ ಮೇಲ್ಚಾವಣಿ ನಿರ್ಮಾಣಕ್ಕೆ ಶಾಸಕ ಕೆ. ರಘುಪತಿ ಭಟ್ ಅವರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 3.00 ಲಕ್ಷ ಅನುದಾನ ಒದಗಿಸಿದ್ದು ಕಾಮಗಾರಿಯ ಉದ್ಘಾಟನೆ ಶನಿವಾರ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು.
ಸ್ಥಳೀಯ ನಗರಸಭಾ ಸದಸ್ಯರಾದ ಕಲ್ಪನಾ ಸುಧಾಮ, ಮಣಿಪಾಲ ಆಟೋ ಯೂನಿಯನ್ ಅಧ್ಯಕ್ಷರಾದ ಸುದೇಶ್ ನಾಯ್ಕ್, ಸ್ಥಾಪಕ ಅಧ್ಯಕ್ಷರಾದ ಪಾಂಡುರಂಗ ನಾಯ್ಕ್, ವೆಂಕಟೇಶ್ ಶೆಟ್ಟಿಗಾರ್ ಉಪಸ್ಥಿತರಿದ್ದರು.