ಉಡುಪಿ: ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ (ರಿ) ಉಡುಪಿ ಜಿಲ್ಲೆ ಇವರ ವತಿಯಿಂದ ವಾರ್ಷಿಕ ಸಮಾರಂಭ, ನೂತನ ವರ್ಷದ ಡೈರಿ ಬಿಡುಗಡೆ, ಸಾರ್ವಜನಿಕ ಸೇವೆ ಸಲ್ಲಿಸಿದವರಿಗೆ, ರಕ್ತದಾನಿಗಳಿಗೆ ಗೌರವ ಸಮರ್ಪಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಜನವರಿ 8 ರಂದು ಬೆಳಗ್ಗೆ 10 ಗಂಟೆಗೆ ನಗರದ ಕಿದಿಯೂರು ಹೋಟೆಲ್‌ನ ರೂಫ್ ಟಾಪ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ನಾಗೇಶ ಬಿಲ್ಲವ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್ ನೆಟಾಲ್ಕರ್, ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ, ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಎಂ ನಾಯಕ್, ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಬಾಬಾ ರೈ, ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ತಾಂತ್ರಿಕ ಸಹಾಯಕ ಕ್ಲಿಫರ್ಡ್ ಲೋಬೋ, ಉಡುಪಿ ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಡಿ. ಬಾಲಕೃಷ್ಣ ಶೆಟ್ಟಿ, ಲಯನ್ಸ್ ಜಿಲ್ಲಾ ಗವರ್ನರ್ ಲ. ವಿ.ಜಿ ಶೆಟ್ಟಿ, ಮೂಡಬಿದ್ರೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್, ಉಡುಪಿ ಅರಣ್ಯ ಸಂಚಾರಿ ದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಕೆ ದಿನಕರ ಶೆಟ್ಟಿ ಅಂಪಾರು, ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಉಡುಪಿ ಜಿಲ್ಲೆಯ ಗೌರವ ಅಧ್ಯಕ್ಷ ಪ್ರಕಾಶ್ಚಂದ್ರ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.