Monday, November 25, 2024
Monday, November 25, 2024

ಜ. 9 ರಿಂದ 11- ಯಕ್ಷ ರಂಗಾಯಣದ ಪರಶುರಾಮ ಪ್ರಥಮ ಪ್ರದರ್ಶನ

ಜ. 9 ರಿಂದ 11- ಯಕ್ಷ ರಂಗಾಯಣದ ಪರಶುರಾಮ ಪ್ರಥಮ ಪ್ರದರ್ಶನ

Date:

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಕೋಟಿ ಚೆನ್ನಯ್ಯ ಥೀಂ ಪಾರ್ಕ್ ಅಭಿವೃದ್ಧಿ ಸಮಿತಿ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಯಕ್ಷ ರಂಗಾಯಣದ ಪರಶುರಾಮ ನಾಟಕದ ಪ್ರಥಮ ಪ್ರದರ್ಶನವು ಜನವರಿ 9 ರಿಂದ 11 ರ ವರೆಗೆ ಕಾರ್ಕಳದ ಕೋಟಿ ಚೆನ್ನಯ್ಯ ಥೀಂ ಪಾರ್ಕ್ನ ವನರಂಗ ವೇದಿಕೆಯಲ್ಲಿ ನಡೆಯಲಿದೆ.

ಜನವರಿ 9 ರಂದು ಸಂಜೆ 6 ಗಂಟೆಗೆ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ.ಸುನಿಲ್ ಕುಮಾರ್ ಅವರು ನಾಟಕೋತ್ಸವವನ್ನು ಉದ್ಘಾಟಿಸಲಿದ್ದು, ಯಕ್ಷ ರಂಗಾಯಣ ನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್ ಮಲ್ಲಿಕಾರ್ಜನ ಸ್ವಾಮಿ, ನಾಟಕಕಾರ ಶಶಿರಾಜ್ ಕಾವೂರು ಭಾಗವಹಿಸಲಿದ್ದಾರೆ. ಅಂದು ಸಂಜೆ 6.35 ರಿಂದ ಯಕ್ಷ ರಂಗಾಯಣ ಕಾರ್ಕಳ ಸಂಚಾರಿ ರಂಗ ತಂಡ ಅಭಿನಯಿಸುವ ಪರಶುರಾಮ ನಾಟಕದ ಪ್ರಥಮ ಪ್ರದರ್ಶನ ನಡೆಯಲಿದ್ದು, ಶಶಿರಾಜ್ ರಾವ್ ಕಾವೂರು ರಚಿಸಿದ್ದು, ಡಾ. ಜೀವನ್ ರಾಂ ಸುಳ್ಯ ನಿರ್ದೇಶಿಸಿದ್ದಾರೆ.

ಜ. 10 ರಂದು ಸಂಜೆ 6.30 ಕ್ಕೆ ರಂಗಾಯಣ ಶಿವಮೊಗ್ಗ ಅಭಿನಯಿಸುವ ಸ್ವಾತಂತ್ರ‍್ಯ ಸಂಗ್ರಾಮದ ನೈಜಕತೆಯಾಧಾರಿತ, ಡಾ.ಸಾಸ್ವೆಹಳ್ಳಿ ಸತೀಶ್ ರಚಿಸಿದ, ಶ್ರೀಪಾದ ಮತ್ತು ಶಿವಶಂಕರ ತೀರ್ಥಹಳ್ಳಿ ನಿರ್ದೇಶನದ ಈಸೂರು ಕೊಡೆವು ನಾಟಕ ಪ್ರದರ್ಶನಗೊಳ್ಳಲಿದೆ. ಜ.11 ರಂದು ಸಂಜೆ 6.30 ಕ್ಕೆ ಶಿವಮೊಗ್ಗ ರಂಗಾಯಣ ಅಭಿನಯಿಸುವ, ನಾ.ಡಿಸೋಜಾ ಅವರ ಕಾದಂಬರಿ ಹಾಗೂ ಎಸ್ ಮಾಲತಿಯವರ ಹಕ್ಕಿ ಕತೆ ಪ್ರದರ್ಶನಗೊಳ್ಳಿದೆ.

ಈ ನಾಟಕವನ್ನು ಗಣೇಶ್ ಮಂದಾರ್ತಿ ಮತ್ತು ಶ್ರವಣ್ ಹೆಗ್ಗೋಡು ನಿರ್ದೇಶಿಸಿದ್ದು, ನಾಟಕೋತ್ಸವಕ್ಕೆ ಪ್ರವೇಶ ಉಚಿತವಾಗಿರುತ್ತದೆ. ಬೈಲೂರಿನಲ್ಲಿ ಲೋಕಾರ್ಪಣೆಗೊಳ್ಳಿರುವ ಪರಶುರಾಮ ಥೀಂ ಪಾರ್ಕ್ ಗೆ ಪೂರಕವಾಗಿ ಪರಶುರಾಮ ನಾಟಕವನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪ್ರದರ್ಶನ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!