Sunday, February 8, 2026
Sunday, February 8, 2026

ಜ. 10- ಆರೋಗ್ಯ ತಪಾಸಣಾ ಮೇಳ

ಜ. 10- ಆರೋಗ್ಯ ತಪಾಸಣಾ ಮೇಳ

Date:

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಾಜ್ಯ ಶಾಖೆ, ಜಿಲ್ಲಾ ಘಟಕ ಉಡುಪಿ, ಕುಂದಾಪುರ ತಾಲೂಕು ಶಾಖೆ ಮತ್ತು ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ಆರೋಗ್ಯ ತಪಾಸಣಾ ಮೇಳ ಹಾಗೂ ಉಚಿತ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣಾ ಶಿಬಿರವು ಜನವರಿ 10 ರಂದು ಬೆಳಗ್ಗೆ 9.30 ಕ್ಕೆ ಕುಂದಾಪುರ ಪದವಿಪೂರ್ವ ಕಾಲೇಜಿನ ಲಕ್ಷ್ಮೀನರಸಿಂಹ ರೋಟರಿ ಹಾಲ್‌ನಲ್ಲಿ ನಡೆಯಲಿದೆ. ಶಿಬಿರವನ್ನು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಉದ್ಘಾಟಿಸಲಿದ್ದು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಶಾಖೆಯ ಸಭಾಪತಿ ಎಸ್ ಜಯಕರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಕುಂದಾಪುರ ತಾಲೂಕು ಶಾಖೆಯ ಅಧ್ಯಕ್ಷರೂ ಆಗಿರುವ ಕುಂದಾಪುರದ ಸಹಾಯಕ ಕಮೀಷನರ್ ರಾಜು ಕೆ., ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಕುಂದಾಪುರ ಪುರಸಭೆಯ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್, ಯೆನಪೋಯ ಮೆಡಿಕಲ್ ಕಾಲೇಜಿನ ಉಪಕುಲಪತಿ ಡಾ. ಎಂ. ವಿಜಯ ಕುಮಾರ್, ರೆಡ್‌ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರುಗಳು ಹಾಗೂ ಮತ್ತಿತರರು ಉಪಸ್ಥಿತರಿರುವರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!